ಚಾಮರಾಜನಗರ

ಅರಣ್ಯ ಇಲಾಖೆಯಲ್ಲಿ ಅಧಿಕಾರಿಗಳ ಕೊರತೆ: ಹೆಚ್ಚಾದ ಕಳ್ಳಬೇಟೆ ಪ್ರಕರಣಗಳು

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ವನ್ಯಧಾಮಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕೊರತೆ ಎದ್ದು ಕಾಣುತ್ತಿದ್ದು, ಕಳ್ಳಬೇಟೆ ಪ್ರಕರಣಗಳು ಜಾಸ್ತಿಯಾಗುತ್ತಿವೆ.

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಲೆ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮಗಳನ್ನು ಒಡೆಲೊಳಗೆ ಇರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಹನೂರು ತಾಲ್ಲೂಕು ಅಪಾರ ವನ್ಯ ಸಂಪತ್ತು ಹಾಗೂ ಅಪರೂಪದ ವನ್ಯಜೀವಿಗಳಿಗೆ ಆಶ್ರಯ ತಾಣವಾಗಿದೆ. ಆದರೆ ಇಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳ ಕೊರತೆ ಹೆಚ್ಚಾಗಿದ್ದು, ಕಳ್ಳಬೇಟೆ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪರಿಸರ ಪ್ರೇಮಿಗಳಿಗೆ ಹೆಚ್ಚಿನ ಆತಂಕ ಶುರುವಾಗಿದೆ.

ಕಳೆದ ಮೂರು ದಶಕಗಳಿಂದಲೂ ಗಡಿಭಾಗದಲ್ಲಿ ವನ್ಯಜೀವಿಗಳ ಕಳ್ಳಬೇಟೆ ಪ್ರಕರಣಗಳು ನಡೆಯುತ್ತಲೇ ಇವೆ. ಅರಣ್ಯ ಇಲಾಖೆ ಸಿಬ್ಬಂದಿ ಕಳ್ಳಬೇಟೆಗಾರರ ಉಪಟಳ ತಪ್ಪಿಸಿ, ವನ್ಯಸಂಪತ್ತನ್ನು ಉಳಿಸಲು ಎಷ್ಟೇ ಶ್ರಮ ವಹಿಸುತ್ತಿದ್ದರೂ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಕೊರತೆಯಿಂದ ಪರಿಣಾಮಕಾರಿಯಾಗಿ ಮಟ್ಟಹಾಕಲು ಇದು ಸಾಧ್ಯವಾಗಿಲ್ಲ.

ಈ ಹಿನ್ನೆಲೆಯಲ್ಲಿ ಕಳ್ಳಬೇಟೆಗಳು ಮತ್ತೆ ಜಾಸ್ತಿಯಾಗಿದ್ದು, ಅಳಿವಿಂಚಿನಲ್ಲಿರುವ ಪ್ರಾಣಿಗಳೇ ಇವರ ಟಾರ್ಗೆಟ್‌ ಆಗಿವೆ. ಇದರ ಜೊತೆಗೆ ಅರಣ್ಯದಂಚಿನ ಜಮೀನಿನಲ್ಲಿ ಈಗ ಬಿತ್ತನೆ ಕಾರ್ಯ ಆರಂಭವಾಗಿದೆ. ಮುಂದೆ ಫಸಲು ಸಮೃದ್ಧವಾಗಿ ಬಂದು ಇನ್ನೇನು ರೈತರ ಕೈ ಸೇರುವಷ್ಟರಲ್ಲಿ ಕಾಡು ಪ್ರಾಣಿಗಳು ಜಮೀನಿನ ಮೇಲೆ ದಾಳಿ ನಡೆಸಿ ಫಸಲನ್ನು ಸಂಪೂರ್ಣವಾಗಿ ಹಾಳು ಮಾಡುತ್ತವೆ.

ಪ್ರಾಣಿಗಳ ಹಾವಳಿ ತಡೆಗಟ್ಟಲು ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆಯಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಆದಷ್ಟು ಬೇಗ ಎಚ್ಚೆತ್ತುಕೊಂಡು ಅರಣ್ಯ ಇಲಾಖೆ ಉಳಿವಿಗಾಗಿ ಹಾಗೂ ರೈತರ ಬೆಳೆ ಉಳಿಸಲು ಇಲಾಖೆಗೆ ಹೆಚ್ಚಿನ ಸಿಬ್ಬಂದಿಯನ್ನು ನೇಮಿಸಬೇಕೆಂದು ಪರಿಸರ ಪ್ರೇಮಿಗಳು ಹಾಗೂ ರೈತರು ಆಗ್ರಹಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

10 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

16 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

16 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

16 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago