ಚಾಮರಾಜನಗರ

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ ಎರಡು ಕೋಟಿ ಸಂಗ್ರಹ!

ಹನೂರು: ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 28 ದಿನಗಳ ಅವಧಿಯಲ್ಲಿ 2.80 ಕೋಟಿ ರೂ. ಸಂಗ್ರಹವಾಗಿದೆ.

ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿರವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮೆರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಿಸಲಾಯಿತು.
ಎಣಿಕೆ ಕಾರ್ಯವು ಸಂಜೆ 7:00 ಗಂಟೆಯವರೆಗೂ ನಡೆಯಿತು.

ಮಹಾನವಮಿ, ಆಯುಧ ಪೂಜೆ ವಿಜಯದಶಮಿ, ದಸರಾ ರಜಾ ದಿನಗಳು, ಅಮಾವಾಸ್ಯೆ, ಸರ್ಕಾರಿ ರಜಾ ದಿನಗಳು ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿದ್ದರಿಂದ ಹರಕೆಯ ರೂಪದಲ್ಲಿ 2,00,80,844 ನಗದು 30 ಗ್ರಾಂ ಚಿನ್ನ ಹಾಗೂ 1,865 ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ.

ಇದಲ್ಲದೆ ಇ ಹುಂಡಿಯಿಂದ 2,74,204 ಒಮಾನ್ 10 ನೋಟು ಸೇರಿದಂತೆ ಇತರೆ ದೇಶಗಳ ನೋಟುಗಳು ಇದಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 22 ನೋಟುಗಳು ಹುಂಡಿಯಲ್ಲಿ ಹಾಕಿದ್ದಾರೆ.

ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು,ಉಪ ಕಾರ್ಯದರ್ಶಿ ಚಂದ್ರಶೇಖರ್, ಲೆಕ್ಕಾ ಅಧೀಕ್ಷಕ ನಾಗೇಶ್, ಜಿಲ್ಲಾಡಳಿತ ಕಚೇರಿ ಮುಜರಾಯಿ ಶಾಖೆಯ ಶ್ವೇತಾ, ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿ ಎಣಿಕೆ ಕಾರ್ಯದಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜಗಕೆ ಮಾದರಿ!

ಜಗಕೆ ಮಾದರಿ! ಭಲೆ ಭಲೇ ಅಂಕೇಗೌಡರೆ ಜಗಕೆ ಮಾದರಿ ನಿಮ್ಮ ಪುಸ್ತಕಪ್ರೀತಿ ಅರಿವಿನ ಆಕರಗಳು ಪುಸ್ತಕಗಳು! ದುಡಿದ ಲಕ್ಷಾಂತರ ಹಣವನು…

2 hours ago

ಓದುಗರ ಪತ್ರ: ವಿವೇಕಾನಂದ ಪ್ರತಿಮೆ ಅನಾವರಣಗೊಳಿಸಿ

ಮೈಸೂರಿನ ವಿವೇಕಾನಂದ ನಗರದ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು, ಪ್ರತಿಮೆಯನ್ನು ಪ್ಲಾಸ್ಟಿಕ್ ಕವರ್‌ನಿಂದ ಮುಚ್ಚಲಾಗಿದೆ. ಜ.೧೨ರಂದು ಸ್ವಾಮಿ ವಿವೇಕಾನಂದರ…

3 hours ago

ಓದುಗರ ಪತ್ರ: ಮಲ್ಲಯ್ಯನ ಬೆಟ್ಟ ಅಭಿವೃದ್ಧಿಗೊಳಿಸಿ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿರುವ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟ (ಮಲ್ಲಯ್ಯನ ಬೆಟ್ಟ) ಪ್ರಸಿದ್ಧ ಪ್ರವಾಸಿ ಮತ್ತು ಧಾರ್ಮಿಕ…

3 hours ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ಚಾಮರಾಜನಗರದ, ಸಿಂಹ ಚಲನಚಿತ್ರಮಂದಿರದ ಎದುರಿರುವ ಎಲ್‌ಐಸಿ ಕಚೇರಿಯ ಮುಂಭಾಗದಲ್ಲಿ ನಂಜನಗೂಡು-ಮೈಸೂರು ಸೇರಿದಂತೆ ವಿವಿಧ ಮಾರ್ಗಗಳ ಬಸ್‌ಗಳು ಸಂಚರಿಸುತ್ತವೆ. ಈ ಸ್ಥಳದಲ್ಲಿ…

3 hours ago

ಓದುಗರ ಪತ್ರ: ರಥೋತ್ಸವ: ಮುನ್ನೆಚ್ಚರಿಕೆ ಅಗತ್ಯ

ಚಾಮರಾಜನಗರ ಜಿಲ್ಲೆ ಮುಕ್ಕಡಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದ ಮಾಯಮ್ಮ ದೇವಿ ರಥೋತ್ಸವದ ವೇಳೆ ರಥದ ಚಕ್ರದ ದಂಡ ಮುರಿದ ಪರಿಣಾಮ…

3 hours ago

ಅಕಾಲಿಕ ಮಳೆಯಿಂದ ಕಾಫಿ ಬೆಳೆಗಾರರಿಗೆ ಸಂಕಷ್ಟ

ಲಕ್ಷ್ಮಿಕಾಂತ್ ಕೊಮಾರಪ್ಪ ಹೂವು ಅರಳುತ್ತಿರುವುದರಿಂದ ಕಾಫಿ ಕೊಯ್ಲಿಗೆ ಅಡ್ಡಿ; ಹೆಚ್ಚುವರಿ ಕಾರ್ಮಿಕ ವೆಚ್ಚವನ್ನು ಭರಿಸಬೇಕಾದ ಅನಿವಾರ್ಯತೆ ಸೋಮವಾರಪೇಟೆ: ತಾಲ್ಲೂಕಿನ ಗ್ರಾಮೀಣ,…

3 hours ago