ಚಾಮರಾಜನಗರ

ಗಡಿಜಿಲ್ಲೆಯಲ್ಲಿ ೫೭ ಮಂದಿಗೆ ಕುಡುಗೋಲು ರೋಗ ಪತ್ತೆ

ಚಾಮರಾಜನಗರ : ಜಿಲ್ಲೆಯ ೫೭ ಮಂದಿಗೆ ಕುಡುಗೋಲು ರೋಗ ಕಾಣಿಸಿಕೊಂಡಿದ್ದು, ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಶುರುವಾಗಿದೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಬಳಿಗಿರಿರಂಗನ ಬೆಟ್ಟ, ಕನ್ನೇರಿ ಕಾಲನಿ, ಪುಣಜನೂರು ಮದ್ದೂರು ಕಾಲನಿ, ಮಹದೇಶ್ವರ ಬೆಟ್ಟ ಸೇರಿ ಇನ್ನಿತರ ಪ್ರದೇಶದಲ್ಲಿ ಅಂದಾಜು ೨೩ ಸಾವಿರಕ್ಕೂ ಹೆಚ್ಚು ಸೋಲಿಗ ಜನರಿದ್ದು, ಈ ಪೈಕಿ ಮಗುವಿನಿಂದ ೪೦ ವರ್ಷದವರೆಗಿನ ೧೧೭೭೦ ಮಂದಿಗೆ ತಪಾಸಣೆ ಮಾಡಲಾಗಿದ್ದು, ಇದರಲ್ಲಿ ೫೭ ಮಂದಿಗೆ ಪಾಸಿಟವ್‌ ಬಂದಿದೆ ಎಂದು ಇಲಾಖೆ ತಿಳಿಸಿದೆ.

ಬುಡಕಟ್ಟು ಜನಾಂಗದಲ್ಲಿರುವವರಿಗೆ ಹೆಚ್ಚಾಗಿ ಈ ಕುಡುಗೋಲು ರೋಗ ಕಾಣಿಸಿಕೊಳ್ಳುತ್ತದೆ. ಹೀಗಾಗಿ ಸರ್ಕಾರದಿಂದ ಜಿಲ್ಲೆಯಲ್ಲಿ ೧೨ ಸಾವಿರ ಮಂದಿಗೆ ತಪಾಸಣೆ ಮಾಡುವ ಗುರಿಯನ್ನ ಹೊಂದಿದ್ದು, ಈಗಾಗಲೇ ೧೧೭೭೦ ಮಂದಿಗೆ ತಪಾಸಣೆ ಮಾಡಲಾಗಿದೆ. ಈ ರೋಗವನ್ನ ತಡೆಗಟ್ಟುವ ಸಲುವಾಗಿ ನಿತಂತರವಾಗಿ ಸರ್ಕಾರದಿಂದ ತಪಾಸಣೆಯ ಜೊತೆಗೆ ಜಾಗೃತಿ ಸಹ ಮೂಡಿಸುವ ಕೆಲಸ ಆಗುತ್ತಿದೆ.

ಇದೊಂದು ಅನುವಂಶಿಕ ಕಾಯಿಲೆಯಾಗಿದ್ದು, ಇದರಲ್ಲಿ ಕೆಂಪು ರಕ್ತ ಕಣಗಳು ಕುಡುಗೋಲು ಆಕಾರದಲ್ಲಿರುವುದರಿಂದ ಇದಕ್ಕೆ ಕುಡುಗೋಲು ರೋಗ ಎನ್ನಲಾಗುತ್ತದೆ. ಈ ರೋಗ ಲಕ್ಷಣವಿರುವ ಪೋಷಕರಿಂದ ಮಕ್ಕಳಿಗೆ ಬರಲಿದ್ದು, ಈ ರೋಗದ ಲಕ್ಷಣವಿರುವ ಹುಡುಗ-ಹುಡುಗಿ ಮದುವೆಯಾದರೂ ಅವರಿಂದ ಅವರ ಮಕ್ಕಳಿಗೆ ಬರಲಿದೆ. ಈಗಾಗಿ ಇದನ್ನ ತಡೆಗಟ್ಟಲು ಪ್ರತಿಯೊಬ್ಬರಿಗೂ ಸಿಕೆಲ್‌ ಸೆಲ್‌ ಅನಿಮಿಯಾ ಕಾರ್ಡ್‌ ಗಳನ್ನ ವಿತರಿಸಲಾಗುತ್ತಿದೆ. ಈಗಾಗಲೇ ಜಿಲ್ಲೆಯಲ್ಲಿ ೧೦೦ ಮಂದಿಗೆ ಈ ಕಾರ್ಡ್‌ ವಿತರಿಸಲಾಗಿದ್ದು, ಇದರಿಂದ ರೋಗಿಗಳು ಶೀಘ್ರವಾಗಿ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಈ ಕಾರ್ಡ್‌ ಮೂಲಕ ಉಚಿತ ಚಿಕಿತ್ಸಾ ಸೇವೆಗಳು, ಔಷಧ ಪಡೆಯಲು ಹಾಗೂ ಸರ್ಕಾರದ ಯೋಜನೆಗಳನ್ನ ಪಡೆದುಕೊಳ್ಳಬಹುದಾಗಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಚಾರಣಕ್ಕೆ ಬಂದಿದ್ದ ಶರಣ್ಯ ಪತ್ತೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ: ಸಚಿವ ಈಶ್ವರ್‌ ಖಂಡ್ರೆ

ದಾವಣಗೆರೆ: ಕೊಡಗಿನ ತಡಿಯಾಂಡಮೋಳ್‌ಗೆ ಚಾರಣಕ್ಕೆ ಬಂದಿದ್ದ ಕೇರಳದ ಯುವತಿ ಜಿ.ಎಸ್.ಶರಣ್ಯ (36) ಪತ್ತೆಗೆ ಮುಖ್ಯಮಂತ್ರಿಗಳು ಸೂಚಿಸಿದ್ದು, ಹೆಚ್ಚುವರಿಯಾಗಿ 40 ಸಿಬ್ಬಂದಿಯ…

1 hour ago

ಗೌರವ ಡಾಕ್ಟರೇಟ್ ಪದವಿ ತಿರಸ್ಕರಿಸಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜಕೀಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಹಾವೇರಿ ವಿಶ್ವವಿದ್ಯಾನಿಲಯವು ನೀಡಲು ತೀರ್ಮಾನಿಸಿದ್ದ ಗೌರವ ಡಾಕ್ಟರೇಟ್ ಪದವಿಯನ್ನು ಮಾಜಿ ಮುಖ್ಯಮಂತ್ರಿ…

1 hour ago

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರ ಬಂಧನ

ಟಿ.ನರಸೀಪುರ: ಜೂಜಾಟದಲ್ಲಿ ಭಾಗಿಯಾಗಿದ್ದ ಐವರನ್ನು ಬಂಧಿಸುವಲ್ಲಿ ಟಿ.ನರಸೀಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಟಿ.ನರಸೀಪುರ ತಾಲ್ಲೂಕಿನ ವಾಟಾಳು ಗ್ರಾಮದಲ್ಲಿ ಘಟನೆ ನಡೆದಿದ್ದು,…

2 hours ago

ಇರಾನ್‌ನಲ್ಲಿ ಕಾಣೆಯಾಗಿದ್ದ US ವಾಯುಪಡೆಯ ಮತ್ತೋರ್ವ ಪೈಲಟ್‌ ರಕ್ಷಣೆ

ವಾಷಿಂಗ್ಟನ್:‌ ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ. ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ…

3 hours ago

ಎಚ್‌ಎಸ್‌ಆರ್‌ಪಿ ಅಳವಡಿಕೆ ಕಡ್ಡಾಯ: ಸಾರಿಗೆ ಇಲಾಖೆ ಸ್ಪಷ್ಟನೆ

ಬೆಂಗಳೂರು: ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ಕಡ್ಡಾಯವಾಗಿ ಅಳವಡಿಸಬೇಕು ಎಂಬ ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟನೆ…

3 hours ago

ಗ್ಯಾರಂಟಿ ಬಿಟ್ಟರೆ ಬೇರೆ ಬಂಡವಾಳ ಇವರಿಗಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಎಚ್‌ಡಿಕೆ ಕಿಡಿ

ದಾವಣಗೆರೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇರುವ ಏಕೈಕ ಬಂಡವಾಳ ಎಂದರೆ ಐದು ಗ್ಯಾರಂಟಿಗಳು ಮಾತ್ರ. ಅವುಗಳನ್ನು ಕೂಡ ಮನಸ್ಸು ಇಚ್ಛೆ,…

4 hours ago