ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದ ಅಂತರಗಂಗೆಯಲ್ಲಿ ಸೋಪು, ಶ್ಯಾಂಪು ಬಳಕೆಗೆ ನಿಷೇಧ ವಿಧಿಸಲಾಗಿದೆ.
ಅಂತರಗಂಗೆಯ 500 ಮೀಟರ್ ವ್ಯಾಪ್ತಿಯಲ್ಲಿ ಸೋಪು, ಶ್ಯಾಂಪು ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಮಲೆಮಹದೇಶ್ವರಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಆದೇಶ ಹೊರಡಿಸಿದೆ.
ಅಂತರಗಂಗೆಯಲ್ಲಿ ನಿತ್ಯ ನೂರಾರು ಭಕ್ತರು ಸ್ನಾನ ಮಾಡುತ್ತಾರೆ. ಸೋಪು, ಶ್ಯಾಂಪು ಬಳಕೆಯಿಂದ ನೀರು ಮಲಿನಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಅಂತರಗಂಗೆಯ ಶುಚಿತ್ವ, ಪಾವಿತ್ರ್ಯತೆ ಕಾಪಾಡಲು ಪ್ರಾಧಿಕಾರ ಈ ಕ್ರಮ ಕೈಗೊಂಡಿದೆ.
ಈ ಸಂಬಂಧ ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸಲಾಗುತ್ತಿದ್ದು, ಯಾರಾದರೂ ನಿಯಮಗಳನ್ನು ಪಾಲಿಸದೇ ಇದ್ದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಲಾಗಿದೆ.
ಬೆಂಗಳೂರು: ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್‌ನಿಂದ ಅಮಾನತುಗೊಳಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದ…
ಪಾಟ್ನಾ: ಬಿಹಾರದ ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕರಿಸಿದರು. ಪಾಟ್ನಾದ ಲೋಕಭವನದಲ್ಲಿ ರಾಜ್ಯಪಾಲ ಸೈಯದ್…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ: ಜಿಲ್ಲೆಯ ನಾಗಮಂಗಲದ ಶ್ರೀ ಆದಿಚುಂಚನಗಿರಿ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬಹುಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ…
ಢಾಕಾ: ಭಾರೀ ಬಿರುಗಾಳಿಯಿಂದ ಅಂಡಮಾನ್ ಸಮುದ್ರದಲ್ಲಿ ಜನದಟ್ಟಣೆಯಿಂದ ತುಂಬಿದ್ದ ದೋಣಿ ಮುಳುಗಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿ ಪ್ರಜೆಗಳು ಸೇರಿದಂತೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಪ್ಪ ಗ್ರಾಮದ ನೀರಿನ…