ಚಾಮರಾಜನಗರ

ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷ ಕಾಳಜಿ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ ಇದಕ್ಕೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು.

ಹನೂರು ಪಟ್ಟಣದ ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಕರೆಯಲಾಗಿದ್ದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಹನೂರು ಪಟ್ಟಣ ಪಂಚಾಯಿತಿಗೆ ಸರ್ಕಾರದಿಂದ ನಿರೀಕ್ಷಿತ ಮಟ್ಟದಲ್ಲಿ ಅನುದಾನ ಬಾರದೆ ಇರುವುದರಿಂದ ಪಟ್ಟಣದ 13 ವಾರ್ಡ್ ಗಳಲ್ಲಿ ಮೂಲಭೂತ ಸೌಲಭ್ಯ ಇಲ್ಲದೆ ಜನರು ಪರಿತಪಿಸುತ್ತಿರುವುದು ಗಮನಕ್ಕೆ ಬಂದಿದೆ.

ಈಗಾಗಲೇ 7ನೇ ವಾರ್ಡಿನಲ್ಲಿ ಕನಿಷ್ಠ ಮೂಲಭೂತ ಸೌಲಭ್ಯವು ಇಲ್ಲದೆ ಇರುವುದರಿಂದ 50 ಲಕ್ಷ ವಿಶೇಷ ಅನುದಾನದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗಿದೆ. ಯೋಜನೆ ನಿರ್ಮಾಣ ಮಾಡಲು 81 ಕೋಟಿ ವೆಚ್ಚದಲ್ಲಿ ಡಿಪಿಆರ್ ಮಾಡಲಾಗಿದೆ. ಪಟ್ಟಣದ ಹದಿಮೂರು ವಾರ್ಡ್ ಗಳಿಗೂ ಸಮಗ್ರ ಕುಡಿಯುವ ನೀರು ಪೂರೈಕೆ ಮಾಡಲು 30 ಕೋಟಿ ಅನುದಾನಕ್ಕೆ ಕ್ರಿಯಾಯೋಜನೆ ಮಾಡಲಾಗಿದೆ. ಈ ಸಾಲಿನ ಬಜೆಟ್ ನಲ್ಲಿ ಅನುದಾನ ನೀಡಿದರೆ ಪಟ್ಟಣವನ್ನು ಅಭಿವೃದ್ಧಿ ಮಾಡಲು ಕ್ರಮವಹಿಸಲಾಗುವುದು ಎಂದರು. ಇನ್ನು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಸ್ವತ್ತು ಸಮಸ್ಯೆ ಇರುವುದರಿಂದ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಈಗಾಗಲೇ ಡ್ರೋನ್ ಸರ್ವೆ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರ ಮನೆಗೂ ಈ ಸ್ವತ್ತು ವಿತರಣೆ ಮಾಡಲಾಗುವುದು. ಸಾರ್ವಜನಿಕರು ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಪಟ್ಟಣ ವ್ಯಾಪ್ತಿಯಲ್ಲಿ ಯುಜಿಡಿ ಹಾಗೂ ಅಮೃತ ಯೋಜನೆ ಅಡಿ ಮನೆಮನೆಗೂ ಕುಡಿಯುವ ನೀರಿನ ಸಂಪರ್ಕ ನೀಡಲು ರಸ್ತೆ ಹರಿಯುತ್ತಿರುವುದರಿಂದ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿಲ್ಲ. ಸಂಪೂರ್ಣ ಕಾಮಗಾರಿ ಮುಗಿದ ನಂತರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲಾಗುವುದು ಎಂದರು.

ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಅಂಗಡಿ ಮಳಿಗೆಗಳಿಂದ ಸಮರ್ಪಕವಾಗಿ ಬಾಡಿಗೆ ವಸೂಲಾತಿ ಮಾಡದೇ ಇರುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗಿದೆ, ಮುಂದಿನ ದಿನಗಳಲ್ಲಿ ವಾಣಿಜ್ಯ ಮಳಿಗೆ ಮಾಲೀಕರಿಗೆ ನೋಟಿಸ್ ನೀಡಿ ವಸೂಲಾತಿ ಮಾಡಬೇಕು, ಏಕಾಏಕಿ ಬಾಗಿಲು ಮುಚ್ಚುವುದು ಬೇಡ ಅವರು ಸಹ ಬಾಡಿಗೆ ಕಟ್ಟಲು ಬದ್ಧರಾಗಿದ್ದಾರೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದರು.

ಪಟ್ಟಣದ ದಲಿತ ಮುಖಂಡ ಕಿರಣ್ ಮಾತನಾಡಿ ಹನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆ ಸ್ವಚ್ಛತೆ ಸಮರ್ಪಕವಾಗಿ ಆಗದೆ ಇರುವುದರಿಂದ ನಿವಾಸಿಗಳಿಗೆ ತೊಂದರೆಯಾಗುತ್ತಿದೆ. ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಗ್ರಾಮ ಠಾಣ ವ್ಯಾಪ್ತಿಯಲ್ಲಿರುವ ನಿವೇಶನಗಳಿಗೆ ಈ ಸ್ವತ್ತು ಮಾಡಿಕೊಡಬೇಕು ಎಂದು ಸಲಹೆ ನೀಡಿದರು.

ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಸಿದ್ದರಾಜು ಮಾತನಾಡಿ ಹನೂರು ಪಟ್ಟಣದ 1,2,4 ವಾರ್ಡ್ ಗಳಲ್ಲಿ ಪರಿಶಿಷ್ಟ ಜಾತಿ ಸಮುದಾಯದವರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಈ ಪೈಕಿ ಕೆಲವರಿಗೆ ಸರ್ಕಾರದಿಂದಲೇ ನಿವೇಶನ ನೀಡಲಾಗಿದೆ ಹಾಗಿದ್ದರೂ ಪಟ್ಟಣ ಪಂಚಾಯಿತಿಯವರು ಈ ಸ್ವತ್ತು ಮಾಡಿಕೊಡದೆ ಕಚೇರಿಗೆ ಅಲೆದಾಟ ಮಾಡಿಸುತ್ತಿದ್ದಾರೆ. ನಿಮ್ಮ ಬಳಿಯೇ ದಾಖಲೆ ಇಲ್ಲದಿದ್ದ ಮೇಲೆ ಇನ್ನು ಸಾರ್ವಜನಿಕರ ಬಳಿ ಎಲ್ಲಿ ದಾಖಲಾತಿ ಸಿಗುತ್ತದೆ ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

ಪಟ್ಟಣ ಪಂಚಾಯಿತಿ ವತಿಯಿಂದ ಮಾಡಿರುವ ಕಾಮಗಾರಿಗಳೆಲ್ಲ ಕಳಪೆ ಕಾಮಗಾರಿಯಾಗಿರುವುದರಿಂದ ಚರಂಡಿ ರಸ್ತೆ ಆರು ತಿಂಗಳಿಗೆ ಕುಸಿಯುತ್ತಿದೆ. ಕೆಲವು ಅಧಿಕಾರಿಗಳು ಆಸ್ತಿಯ ಮಾಲೀಕರು ಹೆಸರನ್ನೇ ತಿದ್ದುಪಡಿ ಮಾಡಿದ್ದಾರೆ ಇದರಿಂದ ಬಡವರು ಕೋರ್ಟ್ ಸುತ್ತುತ್ತಿದ್ದಾರೆ ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ವಹಿಸಬೇಕು, ಕಳೆದ 35 ವರ್ಷಗಳಿಂದ ಬಡವರಿಗೆ ಯಾವುದೇ ನಿವೇಶನ ಹಂಚಿಕೆ ಮಾಡಿಲ್ಲ ಈ ಕೂಡಲೇ ಅಧಿಕಾರಿಗಳು ಸರ್ಕಾರಿ ನಿವೇಶನವನ್ನು ಗುರುತಿಸಿ ಪೌರಕಾರ್ಮಿಕರು ಹಾಗೂ ಬಡವರಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.

ನಾಮನಿರ್ದೇಶಿತ ಸದಸ್ಯ ಮಹಾದೇಶ್ ಮಾತನಾಡಿ ಹನೂರು ಪಟ್ಟಣದ ಪೆಟ್ರೋಲ್ ಬಂಕ್ ಸಮೀಪದ ವೃತ್ತಕ್ಕೆ ನಾಡಪ್ರಭು ಕೆಂಪೇಗೌಡ ವೃತ ಎಂದು ಪಟ್ಟಣ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅನುಮೋದನೆಗೊಂಡಿದೆ. ಆದರೆ ಅಧಿಕಾರಿಗಳು ದಾಖಲಾತಿಗಳನ್ನು ಇನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಿಕೊಡದೆ ಇರುವುದರಿಂದ ವೃತ್ತ ನಾಮಕರಣ ಪ್ರಕ್ರಿಯೆ ವಿಳಂಬವಾಗಿದೆ ಈ ಕೂಡಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ , ಪುತ್ತಳಿ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಬೇಕು ಎಂದರು.

ಶಾಸಕ ಎಂಆರ್ ಮಂಜುನಾಥ್ ಪ್ರತಿಕ್ರಿಯಿಸಿ ಈಗಾಗಲೇ ನಾಡಪ್ರಭು ಕೆಂಪೇಗೌಡ ವಿರುದ್ಧದ ಸಂಬಂಧ ಸಮುದಾಯದವರು ಹಲವಾರು ಬಾರಿ ಗಮನಕ್ಕೆ ತಂದಿದ್ದಾರೆ ಈ ಕೂಡಲೇ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಕಚೇರಿ ಕಳುಹಿಸಿ ಸರ್ಕಾರಕ್ಕೆ ವರದಿ ನೀಡಿ ನಾನು ಸಂಬಂಧಪಟ್ಟವರ ಜೊತೆ ಚರ್ಚಿಸಿ ವೃತ್ತ ನಾಮಕರಣಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದರು.

ಕಾರ್ಯನಿರತ ಪತ್ರಕರ್ತರ ಸಂಘದ ಗೌರವ ಅಧ್ಯಕ್ಷ ಮಹಾದೇಶ್ ಮಾತನಾಡಿ, ಪ್ರತಿ ವರ್ಷ ಪಟ್ಟಣ ಪಂಚಾಯಿತಿ ಬಜೆಟ್ ನಲ್ಲಿ ಪತ್ರಕರ್ತರ ಶ್ರೇಯೋಭಿವೃದ್ಧಿಗಾಗಿ 5 ಲಕ್ಷ ಮೀಸಲಿಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಕೇವಲ ಹತ್ತು ಸಾವಿರ ಮಾತ್ರ ಖರ್ಚಾಗಿದೆ, ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಪತ್ರಕರ್ತರಿಗೆ ಆ ಹಣದಲ್ಲಿ ಲ್ಯಾಪ್ಟಾಪ್ ವಿತರಣೆ ಮಾಡಬೇಕು ಎಂದು ಮನವಿ ಮಾಡಿದರು. ಶಾಸಕರು ಮುಂದಿನ ದಿನಗಳಲ್ಲಿ ಲ್ಯಾಪ್ ಟಾಪ್ ನೀಡಲು ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಯುವ ಮುಖಂಡ ಪ್ರಸನ್ನ ಮಾತನಾಡಿ, ಹನೂರು ಪಟ್ಟಣ ವ್ಯಾಪ್ತಿಯಲ್ಲಿ ಯಾರಾದರೂ ಮೃತಪಟ್ಟರೆ ಶವ ಸಂಸ್ಕಾರ ಮಾಡಲು ಶವ ಸಾಗಿಸುವ ಯಂತ್ರ ಇಲ್ಲದೆ ತೊಂದರೆಯಾಗುತ್ತಿದೆ ಶಾಸಕರ ಅನುದಾನದಲ್ಲಿ ಸಹ ಸಾಗಿಸುವ ವಾಹನ ನೀಡಬೇಕು ಎಂದು ಮನವಿ ಮಾಡಿದರು.

ಪಟ್ಟಣ ಪಂಚಾಯಿತಿ ಆಡಳಿತಾಧಿಕಾರಿ ತಹಸಿಲ್ದಾರ್ ಚೈತ್ರ ಮುಖ್ಯಾಧಿಕಾರಿ ರೇಖಾ, ಸಮುದಾಯ ಸಂಘಟನಾಧಿಕಾರಿ ಚಂದ್ರಕುಮಾರ್, ಆರೋಗ್ಯ ನಿರೀಕ್ಷಕ ಪ್ರಕಾಶ್, ದ್ವಿತೀಯ ದರ್ಜೆ ಸಹಾಯಕರುಗಳಾದ ಮಾದೇಶ್, ಪ್ರತಾಪ್ ಮಾಜಿ ಅಧ್ಯಕ್ಷರಾದ ಮಮ್ತಾಜ್ ಬಾನು, ಬಾಲರಾಜ್ ನಾಯ್ಡು ಮಾಜಿ ಸದಸ್ಯೆ ಲತಾಮಣಿ ಮುಖಂಡರಾದ ಸಿದ್ದೇಗೌಡ, ವಿಜಯಕುಮಾರ್, ಗುರುಸ್ವಾಮಿ, ಮಹದೇವ ಸೇರಿದಂತೆ ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ರಣರಂಗವನ್ನು ಬಿಟ್ಟು ಓಡಿ ಹೋಗುವ ಹೇಡಿ ನಾನಾಗಲಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…

2 hours ago

ಯುವಜನತೆಯು ಜ್ಞಾನ ಕೌಶಲ್ಯಗಳನ್ನು ಬೆಳೆಸಿಕೊಳ್ಳಿ ಮತ್ತು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಿ: ಎನ್.ಚಲುವರಾಯಸ್ವಾಮಿ

ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…

2 hours ago

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…

2 hours ago

ಬಿಜೆಪಿ ಶಾಸಕ ಭೈರತಿ ಬಸವರಾಜು ಜೈಲುಪಾಲು: ಫೆ.26ರವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌…

3 hours ago

ವಿಧಾನಸೌಧದಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾದಂತಿದೆ: ನಿಖಿಲ್‌ ಕುಮಾರಸ್ವಾಮಿ

ಬೆಂಗಳೂರು: ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

3 hours ago

ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?: ತಜ್ಞರಿಂದ ಸಮೀಕ್ಷೆಗೆ ವಿಶ್ವನಾಥ್‌ ಒತ್ತಾಯ

ಮೈಸೂರು: ಪಂಚ ಗ್ಯಾರಂಟಿಗಳನ್ನು ನೀಡಿದ ನಂತರ ರಾಜ್ಯದಲ್ಲಿ ಅಭಿವೃದ್ಧಿ ಆಗಿದೆಯೋ ಇಲ್ಲವೋ ಎಂಬ ಬಗ್ಗೆ ಸಮೀಕ್ಷೆ ನಡೆಸಲು ತಜ್ಞರ ಸಮಿತಿ…

5 hours ago