ಹನೂರು: ಶ್ರೀ ಕ್ಷೇತ್ರ ಪವಾಡ ಪುರುಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ವಿಶೇಷ ಪೂಜೆ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ ವಿಧಾನಗಳೊಂದಿಗೆ ನೆರವೇರಿತು.
ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪೂಜಾ ಕಾರ್ಯಕ್ರಮಗಳು ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತ್ರತ್ವದಲ್ಲಿ ಬೇಡಗಂಪಣ ಸರದಿ ಅರ್ಚಕರ ಅಧ್ಯಕ್ಷತೆಯಲ್ಲಿ ಮಹದೇಶ್ವರನಿಗೆ ಮುಂಜಾನೆಯಿಂದಲೆ ಬಿಲ್ವಪತ್ರೆ, ಹಾಲು ಮೊಸರು ಸೇರಿದಂತೆ ಇನ್ನಿತರ ಅಭಿಷೇಕದ ವಿಶೇಷ ಪೂಜೆ ಕಾರ್ಯಕ್ರಮಗಳು, ದೂಪದ ಸೇವೆ ಮಹಾಮಂಗಳಾರತಿ ಸಂಭ್ರಮ ಸಡಗರದಿಂದ ನಡೆಯಿತು.
ವಿಶೇಷ ಉತ್ಸವಗಳು : ಮಹಾಲಯ ಅಮಾವಾಸ್ಯೆ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಪೂಜಾ ಕಾರ್ಯಕ್ರಮಗಳ ಜೊತೆ ಹರಕೆ ಹೊತ್ತ ಸಾರ್ವಜನಿಕರು ಬೆಳಗ್ಗೆ 8:00 ಗಂಟೆ ಸಮಯದಲ್ಲಿ ಬೆಳ್ಳಿ ರಥೋತ್ಸವ ಹಾಗೂ ಹುಲಿವಾಹನ ಉತ್ಸವ ಮತ್ತು ರುದ್ರಾಕ್ಷಿ ಮಂಟಪೋತ್ಸವ, ಮಲೆ ಮಹದೇಶ್ವರ ಉತ್ಸವ ಬಸವ, ಮುಡಿಸೇವೆ, ದೂಪದ ಸೇವೆ, ಪಂಜಿನ ಸೇವೆ ಹಾಗೂ ಉರುಳು ಸೇವೆ ಸಲ್ಲಿಸಿ ಉಘೇ ಮಾದಪ್ಪ ಉಘೇ ಎಂದು ನಾಮಸ್ಮರಣೆ ಮಾಡುವ ಮೂಲಕ ಜಯ ಘೋಷ ಹಾಕಿದರು.
ಗಮನಸೆಳೆದ ವಿಶೇಷ ಅಲಂಕಾರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ದೇವಾಲಯದ ಆವರಣ ಸುತ್ತಲಿನ ಪ್ರದೇಶಗಳಲ್ಲಿ ವಿಶೇಷ ಹೂವಿನ ಅಲಂಕಾರ ವಿವಿಧ ಫಲ ಪುಷ್ಪಗಳಿಂದ ಅಲಂಕಾರ ಮಾಡಲಾಗಿತ್ತು.
ವಿಶೇಷ ದಾಸೋಹ : ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವಕ್ಕೆ ಬರುವ ಸಾರ್ವಜನಿಕರಿಗೆ ವಿಶೇಷ ದಾಸೋಹ ವ್ಯವಸ್ಥೆ ಕಲ್ಪಿಸುವ ಮೂಲಕ ಬೆಳಗಿನ ಉಪಹಾರ ಕಾರ ಪೊಂಗಲ್, ಸಿಹಿ ಪೊಂಗಲ್, ತರಕಾರಿ ಬಾತ್, ಪುಳಿಯೋಗರೆ, ಮೊಸರನ್ನ ಹಾಗೂ ಮಧ್ಯಾಹ್ನ ಉಪಹಾರ, ಅನ್ನ ಸಾಂಬಾರು, ಮೊಸರು ಹುಳಿ, ರಸಂ, ತರಕಾರಿ ಪಲ್ಯವನ್ನು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ವಿತರಿಸಲಾಯಿತು.
ಇನ್ನು ಮಹಾಲಯ ಅಮಾವಾಸ್ಯೆ ಪ್ರಯುಕ್ತ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ತಮಿಳುನಾಡಿನಿಂದಲೂ ಸಹ ಲಕ್ಷಾಂತರ ಜನರು ಆಗಮಿಸುವ ಮೂಲಕ ಸರದಿ ಸಾಲಿನಲ್ಲಿ ನಿಂತು ಮಲೆ ಮಹದೇಶ್ವರರ ದರ್ಶನ ಪಡೆದರು. ಶ್ರೀ ಕ್ಷೇತ್ರದಲ್ಲಿ ಎತ್ತ ನೋಡಿದರೂ ಮಹದೇಶ್ವರರ ಬೆಟ್ಟದಲ್ಲಿ ಭಾರೀ ಜನ ಸಮೂಹವೇ ನೆರದಿತ್ತು.
ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದ ಕಾರ್ಯದರ್ಶಿ: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ದಿನಗಳಿಂದ ನಡೆಯುತ್ತಿರುವ ಶ್ರೀ ಮಹಾಲಯ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಿದ್ದ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ವಹಿಸಲು ಪ್ರಾಧಿಕಾರದ ಕಾರ್ಯದರ್ಶಿ ರಘುರವರು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದರು. ಪ್ರತಿ ಗಂಟೆಗೊಮ್ಮೆ ರಾಜಗೋಪುರ, ಹಿರಿಯ ನಾಗರಿಕರ ವಿಶೇಷ ದರ್ಶನ, ಧರ್ಮದರ್ಶನ, ವಿಶೇಷ ಚೇತನರ ಲೈನ್ಗಳನ್ನು ಪರಿಶೀಲನೆ ಮಾಡಿ ಯಾವುದೇ ನೂಕು ನುಗ್ಗಲು ಆಗದಂತೆ ಕ್ರಮವಹಿಸಲು ಸಿಬ್ಬಂದಿಗಳಿಗೆ ಸೂಚನೆ ನೀಡುತ್ತಿದ್ದರು.
೨.೫ ಲಕ್ಷ ಲಾಡು ಮಾರಾಟ: ಮಹಾಲಯ ಅಮಾವಾಸ್ಯೆ ಜಾತ್ರೆ ಮಹೋತ್ಸವ ಹಿನ್ನೆಲೆ ಒಂದು ಲಕ್ಷಕ್ಕೂ ಹೆಚ್ಚು ಲಾಡು ಶೇಖರಣೆ ಮಾಡಲಾಗಿತ್ತು .ಇದರ ಜೊತೆಗೆ ಹೆಚ್ಚಿನ ಸಿಬ್ಬಂದಿಗಳನ್ನು ಬಳಕೆ ಮಾಡಿಕೊಂಡು ಒಂದುವರೆ ಲಕ್ಷ ಲಾಡು ತಯಾರು ಮಾಡಲಾಗಿತ್ತು ಬುಧವಾರ ಸಂಜೆಯವರೆಗೆ ೨.೫ ಲಕ್ಷ ಲಾಡು ಮಾರಾಟವಾಗಿದೆ ಎಂದು ತಿಳಿದು ಬಂದಿದೆ.
ಸ್ವಚ್ಛತೆಗೆ ಹೆಚ್ಚಿನ ಒತ್ತು: ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಕ್ಕೆ ಲಕ್ಷಾಂತರ ಜನರು ಆಗಮಿಸಿ ದೇವಾಲಯದ ಹೊರ ಆವರಣದಲ್ಲಿ ಪೂಜೆ ಸಲ್ಲಿಸಿ ಬಿಸಾಡಿದ್ದ ತ್ಯಾಜ್ಯ ಪದಾರ್ಥಗಳು ಹಾಗೂ ಪಾದ ರಕ್ಷಗಳನ್ನು ಎಲ್ಲೆಂದರಲ್ಲಿ ಬಿಟ್ಟಿದ್ದರಿಂದ ಸ್ವಚ್ಛತೆ ಮಾಡಲು ಪೌರಕಾರ್ಮಿಕ ಸಿಬ್ಬಂದಿಗಳನ್ನು ನೇಮಕ ಮಾಡಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು.
ಮಹಾಲಯ ಅಮಾವಾಸ್ಯೆ ಪ್ರಯುಕ್ತ ಯಾವುದೇ ಅಹಿತಕರ ಘಟನೆಯಾಗದಂತೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರರವರ ನೇತೃತ್ವದಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಬಾಳೆಕೆರೆ ಗ್ರಾಮದಲ್ಲಿ ಗ್ರಂಥಾಲಯವಿಲ್ಲದೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ. ಗ್ರಾಮದಲ್ಲಿ ೧೦೦ಕ್ಕೂ ಹೆಚ್ಚು…
ಪತ್ರಿಕಾ ವಿತರಕರು ಅಕ್ಷರಶಃ ಸಮಾಜದ ಅದೃಶ್ಯ ಕಾಯಕಯೋಗಿಗಳು. ಮಳೆ, ಗಾಳಿ, ಚಳಿ ಎನ್ನದೆ ಜ್ಞಾನದೀವಿಗೆ ಹಂಚುವ ಇವರ ಬದುಕು ಇಂದಿಗೂ…
ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿರುವ ಸರ್ಕಾರಿ ಶಾಲೆಯನ್ನು ಉನ್ನತಿಕರಣಗೊಳಿಸದೇ ಇರುವುರಿಂದ ಪೋಷಕರು ಮಕ್ಕಳನ್ನು ಶಾಲೆಗೆ ದಾಖಲಿಸಲು ಹಿಂದೇಟು ಹಾಕುತ್ತಿದ್ದಾರೆ. ಪ್ರಸ್ತುತ…
ಸೈಬರ್ ವಂಚನೆಯ ಸಂತ್ರಸ್ತರಿಗೆ ಗರಿಷ್ಟ ರೂ.೨೫,೦೦೦ ಪರಿಹಾರ ನೀಡುವುದಾಗಿ ಭಾರತದ ರಿಸರ್ವ್ ಬ್ಯಾಂಕ್ ಪ್ರಕಟಿಸಿರುವುದು ಸ್ವಾಗತಾರ್ಹವಾಗಿದೆ. ಆದರೆ, ಅನೇಕ ಸಂದರ್ಭಗಳಲ್ಲಿ…
ಮೈಸೂರಿನ ಕೆಲವು ಬಡಾವಣೆಗಳಲ್ಲಿ ಈಗಾಗಲೇ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ದವರು ಭೂಗತ ಕೇಬಲ್ ಅಳವಡಿಸುವ ಸಲುವಾಗಿ ಯಂತ್ರಗಳ…
ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ…