ಚಾಮರಾಜನಗರ

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ ಬಸವನ ಮೂರ್ತಿ ಹೊತ್ತು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಂಗಳವಾರ ಮೆರವಣಿಗೆ ಮಾಡಿದರು.

ಬೆಳಿಗ್ಗೆ ಗ್ರಾಮದ ಶ್ರೀಚಂಗೂರು ಮಾರಮ್ಮ ದೇವಾಲಯದಲ್ಲಿ ಗ್ರಾಮಸ್ಥರು ಪೂಜೆ ಸಲ್ಲಿಸಿ ನಂತರ ತಲೆಯ ಮೇಲೆ ಬಸವನ ವಿಗ್ರಹ ಹೊತ್ತು ಮೆರವಣಿಗೆ ಮಾಡಿದರು. ಮನೆ ಮನೆಗಳ ಮುಂದೆ ಗ್ರಾಮಸ್ಥರು ಪೂಜೆ ಸಲ್ಲಿಸಿ ಬಸವನ ಮೂರ್ತಿ ಹೊತ್ತ ಯುವಕನ ತಲೆ ಮೇಲೆ ಬಕೆಟ್ ಗಟ್ಟಲೆ ನೀರನ್ನು ಸುರಿದರು .ಈ ವೇಳೆ ಜನತೆ ಅಕ್ಕಿ, ತೆಂಗಿನಕಾಯಿ, ಬೆಲ್ಲ , ದವಸ ಧಾನ್ಯಗಳನ್ನು ಮತ್ತು ಹಣವನ್ನು ಕಾಣಿಕೆಯಾಗಿ ನೀಡಿದರು.

ಮೆರವಣಿಗೆ ಉದ್ದಕ್ಕೂ ಉಯ್ಯೋ ಉಯ್ಯೋ ಮಳೆರಾಯ, ಹೂವಿನ ತೋಟಕ್ಕೆ ನೀರಿಲ್ಲ….ಬಾರೋ ಬಾರೋ ಮಳೆರಾಯ, ಬಾಳೆ ತೋಟಕೆ ನೀರಿಲ್ಲ ಎಂಬ ಘೋಷಣೆಯನ್ನು ಕೂಗುತ್ತಾ ತಮಟೆ ಸದ್ದಿಗೆ ಹೆಜ್ಜೆಹಾಕಿ ಗಮನ ಸೆಳೆದರು. ನಂತರ ಗ್ರಾಮದ ಹೊರವಲಯದಲ್ಲಿರುವ ಶ್ರೀಜಡೆಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದರು. ಮೆರವಣಿಗೆ ಸಂದರ್ಭದಲ್ಲಿ ಸಂಗ್ರಹಿಸಲಾದ ದವಸ ಧಾನ್ಯಗಳನ್ನು ಬಳಸಿ ಅಡುಗೆ ಮಾಡಿ (ಪರು ಮಾಡಿ) ಎಲ್ಲರೂ ಪ್ರಸಾದವಾಗಿ ಸ್ವೀಕರಿಸಿದರು. ಗ್ರಾಮದ ನೂರಾರು ಜನರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago