Mysore
13
scattered clouds

Social Media

ಸೋಮವಾರ, 22 ಡಿಸೆಂಬರ್ 2025
Light
Dark

ಚಾಮರಾಜನಗರ| ವಿಜೃಂಭಣೆಯಿಂದ ನಡೆದ ಶ್ರೀ ಚೌಡೇಶ್ವರಿ ಅಮ್ಮನವರ 66ನೇ ವರ್ಷದ ವರ್ಧಂತಿ ಮಹೋತ್ಸವ

ಚಾಮರಾಜನಗರ: ನಗರದ ದೇವಾಂಗ 2ನೇ ಬೀದಿಯಲ್ಲಿರುವ ಶ್ರೀ ರಾಮಲಿಂಗ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ 66ನೇ ವರ್ಷದ ಶ್ರೀ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವವನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.

ಇಂದು ಬೆಳಗ್ಗೆ ದೇವಸ್ಥಾನದಲ್ಲಿ ವಿಶೇಷ ಹೋಮ ಹವನ ಹಾಗೂ ದೇವರಿಗೆ ಅಭಿಷೇಕ ಮಾಡುವ ಮೂಲಕ ಮಹಾಮಂಗಳಾರತಿ ನೆರವೇರಿಸಲಾಯಿತು.

ವಿವಿಧ ಭಾಗಗಳಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಸಾರ್ವಜನಿಕರು ದೇವರಿಗೆ ನಮಸ್ಕರಿಸಿ ಇಷ್ಟಾರ್ಥ ಸಿದ್ದಿಗೆ ಪ್ರಾರ್ಥನೆ ಮಾಡಿದರು. ಶ್ರೀ ಚೌಡೇಶ್ವರಿ ತಾಯಿಗೆ ವಿಶೇಷ ಹೂವಿನ ಅಲಂಕಾರ, ಬೆಳ್ಳಿ ಆಭರಣಗಳನ್ನು ತೊಡಿಸಲಾಗಿದ್ದು, ನೆರೆದಿದ್ದ ಸಾವಿರಾರು ಸಾರ್ವಜನಿಕರು ದೇವರನ್ನು ಕಣ್ತುಂಬಿಕೊಂಡರು. ಇದೇ ಸಂದರ್ಭದಲ್ಲಿ ಬಂದ ಎಲ್ಲಾ ಸಾರ್ವಜನಿಕರಿಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.

 

Tags:
error: Content is protected !!