ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ದೇವಾಲಯದಲ್ಲಿ ಭಾನುವಾರ ರಥೋತ್ಸವದ ಅಂಗವಾಗಿ ತೇರಿಗೆ ವಿವಿಧ ಪಲ ಪುಷ್ಪಗಳಿಂದ ಅಲಂಕಾರಗೊಳಿಸಿ ಸ್ವಾಮಿಯ ವಿಗ್ರಹ ಮೂರ್ತಿ ಇಟ್ಟು ಪೂಜೆ ಸಲ್ಲಿಸಿದ ಬಳಿಕ ದೇವಾಲಯದ ಸುತ್ತಲೂ ಪ್ರದಕ್ಷಿಣೆ ಹಾಕಲಾಯಿತು. ಈ ವೇಳೆ ಶ್ರೀ ಲಕ್ಷ್ಮಿ ವೆಂಕಟರಮಣ ಸ್ವಾಮಿಯ ಭಕ್ತಾದಿಗಳು ಗೋವಿಂದಾ ಗೋವಿಂದಾ ನಾಮಸ್ಮರಣೆಯ ಮೂಲಕ ಮಹಾರಥೋತ್ಸವವನ್ನು ಕಣ್ತುಂಬಿಕೊಂಡರು. ರಥಕ್ಕೆ ಹಣ್ಣು ಜವನ, ದವಸ ಧಾನ್ಯ ಎಸೆದು ತಮ್ಮ ಹರಕೆ ತೀರಿಸಿದರು.
ಎರಡನೇ ಚಿಕ್ಕ ತಿರುಪತಿಯಂದೇ ಪ್ರಖ್ಯಾತಿ: ಹನೂರು ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರುವ ಶಿರಗೋಡು ಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯ ತಾಲೂಕಿನ ಎರಡನೇ ಚಿಕ್ಕ ತಿರುಪತಿಯಂದೇ ಪ್ರಖ್ಯಾತಿ ಪಡೆದಿದ್ದು, ಪ್ರಧಾನ ಅರ್ಚಕ ರಾಮಕೃಷ್ಣ ಅವರ ನೇತೃತ್ವದಲ್ಲಿ ಬೆಳಗ್ಗಿನಿಂದ ದೇವಾಲಯದ ಶ್ರೀ ಲಕ್ಷ್ಮಿ ವೆಂಕಟೇಶ್ವರ ಪದ್ಮಾವತಿಗೆ ವಿಶೇಷ ಪೂಜೆ ಕಾರ್ಯಕ್ರಮಗಳನ್ನು ಸಲ್ಲಿಸಲಾಯಿತು.
ಭಕ್ತರ ದಂಡು: ಶ್ರೀ ಲಕ್ಷ್ಮಿ ವೆಂಕಟೇಶ್ವರ ರಥೋತ್ಸವಕ್ಕೆ ಹನೂರು ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಗಳಾದ ಲೊಕ್ಕನಹಳ್ಳಿ ಉದ್ದನೂರು, ಬೆಳ್ತೂರು, ಮಹಾಲಿಂಗನ ಕಟ್ಟೆ ಗ್ರಾಮಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. ಬೆಳಿಗ್ಗೆ 11.00 ರಿಂದ 12 ಗಂಟೆವರೆಗೆ ನಡೆದ ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರು ಸರತಿ ಸಾಲಿನಲ್ಲಿ ನಿಂತು ಸ್ವಾಮಿಯ ದರ್ಶನ ಪಡೆದು ಪುನೀತರಾದರು.
ಬಿಗಿ ಬಂದೋಬಸ್ತ್: ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ರಥೋತ್ಸವ ವೇಳೆ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಹನೂರು ಪೊಲೀಸರು ಸೂಕ್ತ ಬಂದೋಬಸ್ತ್ ಕೈಗೊಂಡಿದ್ದರು.
ಪ್ರಸಾದ ವಿತರಣೆ: ರಥೋತ್ಸವಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಮಜ್ಜಿಗೆ ಪಾನಕ ಅನ್ನದಾಸೋಹ ವ್ಯವಸ್ಥೆಯನ್ನು ದೇವಾಲಯ ಆಡಳಿತ ಮಂಡಳಿ ವತಿಯಿಂದ ಏರ್ಪಡಿಸಲಾಗಿತ್ತು. ಇದೇ ವೇಳೆ ಯುವ ಮುಖಂಡ ನವನೀತ್ ಗೌಡ ಹಾಗೂ ಆರ್ಚಕರಾದ ವಾಸು, ವಿಷ್ಣು, ಕದೀರ್ ವೇಲ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಟೆಹರಾನ್: ಇಸ್ರೇಲ್ ನಡೆಸುತ್ತಿರುವ ಕ್ಷಿಪಣಿ ದಾಳಿಗೆ ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಛಿದ್ರಗೊಂಡ ಆಕಾಶದೆತ್ತರದ ಕಟ್ಟಡಗಳು..! ಟೆಹರಾನ್‌ನಲ್ಲಿನ ಬೃಹತ್ ಕಟ್ಟಡಗಳು…
ಶಿವಮೊಗ್ಗ: ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ…
ಜಮ್ಮು-ಕಾಶ್ಮೀರ: ಇಸ್ರೇಲ್ ಮತ್ತು ಅಮೇರಿಕಾ ಇರಾನ್ ಮೇಲೆ ನಡೆಸಿದ ದಾಳಿಯಲ್ಲಿ ರಾಷ್ಟ್ರದ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಸಾವನ್ನಪ್ಪಿದ್ದಾರೆ.…
ನವದೆಹಲಿ: ಇರಾನ್-ಇಸ್ರೇಲ್-ಅಮೆರಿಕ ಯುದ್ಧ ನಡುವೆಯೇ ಭಾರತದಲ್ಲಿ ಅಚ್ಚರಿ ಬೆಳವಣಿಗೆಯಲ್ಲಿ ಗ್ಯಾಸ್ ಸಿಲಿಂಡರ್ ದರ ಇಳಿಕೆ ಕಂಡುಬಂದಿದೆ. ತೈಲ ಕಂಪನಿಗಳು ವಾಣಿಜ್ಯ…
ನಾಗ್ಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ ಮಹಿಳೆಯರು ಸೇರಿದಂತೆ 15 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾಗ್ಪರ ಜಿಲ್ಲೆಯಲ್ಲಿ…
ಮಂಡ್ಯ: ಯುವಜನರು ಮಾದಕ ವ್ಯಸನದಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ನಿರ್ಮಿಸಬಹುದು. ಯುವಜನತೆಯು ಮಾದಕ ವಸ್ತುಗಳಿಗೆ ಬಲಿಯಾಗದೆ ಅದರಿಂದ ದೂರವಿರಬೇಕು ಎಂದು…