Mysore
29
few clouds

Social Media

ಶನಿವಾರ, 07 ಡಿಸೆಂಬರ್ 2024
Light
Dark

ಚುನಾವಣಾ ತರಬೇತಿ ವೇಳೆ ಹೃದಯಾಘಾತದಿಂದ ಸಿಬ್ಬಂದಿ ಸಾವು

ಚಾಮರಾಜನಗರ : ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಯಲ್ಲಿ ಭಾಗವಹಿಸಿದ್ದ ಜಗದೀಶ್ (40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಎಆರ್ ಒ ಹಾಗೂ ಪಿಆರ್ ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹೋಲಿಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ದಾರಿ ಮಧ್ಯೆಯೇ‌ ಕೊನೆ ಉಸಿರು ಎಳೆದರು.

ಸ್ಥಳಕ್ಕೆ ಜಿಲ್ಲಾಧಿಕಾರಿ ಡಿ.ಎಸ್ ರಮೇಶ್ ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ