ಚಾಮರಾಜನಗರ

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೇರಿಕಾಡ್ ವೆಳ್ಳಾರಿ ಬೋರೆ ಗ್ರಾಮದ ನಿವಾಸಿಗಳು ಗ್ರಾಮ ಪಂಚಾಯಿತಿ ಕಚೇರಿ ಮುಂಭಾಗ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ಸೋಮವಾರ ಬೆಳಗ್ಗೆ ಜರುಗಿದೆ.

ಕುಡಿಯುವ ನೀರು ಪೂರೈಕೆ ಮಾಡದ ಗ್ರಾಮ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಗ್ರಾಮದ ನಿವಾಸಿಗಳು ವಿವಿಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು

ಪ್ರತಿಭಟನಾಕಾರರು ಮಾತನಾಡಿ, ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಏರಕಾಡ್ ವೆಳ್ಳಾರಿ ಬೋರೆ, ಅಂತೋನಿಯರ್ ಕೋವಿಲ್ ಗ್ರಾಮ ವ್ಯಾಪ್ತಿಯಲ್ಲಿ 150ಕ್ಕೂ ಹೆಚ್ಚು ಕುಟುಂಬಗಳಿದ್ದು, ಕಳೆದ ಹಲವಾರು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.

ಕುಡಿಯುವ ನೀರಿನ ಸಮಸ್ಯೆ ಇರುವುದರಿಂದ ಪ್ರತಿನಿತ್ಯ ಮಕ್ಕಳು ಸಮಯಕ್ಕೆ ಸರಿಯಾಗಿ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ನೀರಿನ ಅಭಾವದಿಂದ ಪ್ರತಿನಿತ್ಯ ಸ್ನಾನ ಮಾಡಲು ಸಾಧ್ಯವಾಗುತ್ತಿಲ್ಲ, ಕೆಲವೊಮ್ಮೆ ಶೌಚಾಲಯಕ್ಕೂ ಹೋಗಲು ಕೂಡ ತೊಂದರೆಯಾಗುತ್ತಿದೆ. ಗ್ರಾಮಕ್ಕೆ ಎರಡು ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತದೆ. ಇದರಿಂದ ಯಾವುದೇ ಪ್ರಯೋಜನವಾಗಿಲ್ಲ. ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದ ನೀರು ನೀಡಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬೇಜವಾಬ್ದಾರಿ ಪಿಡಿಓ: ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಚೆನ್ನೇಶ್ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸಮಸ್ಯೆಗಳನ್ನು ಹೇಳಿದರೆ ನಮ್ಮ ವಿರುದ್ಧವೇ ಏರು ದ್ವನಿಯಲ್ಲಿ ಮಾತನಾಡುತ್ತಾರೆ. ಕುಡಿಯುವ ನೀರಿನ ಸಮಸ್ಯೆ ಇದ್ದರೂ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮವಹಿಸುತ್ತಿಲ್ಲ. ಚರಂಡಿಗಳಲ್ಲಿ ಹೂಳು ತುಂಬಿ ಗಬ್ಬು ನಾರುತ್ತಿದೆ. ಈಗಾಗಲೇ ಬೇಸಿಗೆ ಪ್ರಾರಂಭವಾಗಿರುವುದರಿಂದ ಸಾಂಕ್ರಾಮಿಕ ಕಾಯಿಲೆಗಳು ಪ್ರಾರಂಭವಾಗುತ್ತಿದೆ. ಇವರು ಸರಿಯಾಗಿ ಕರ್ತವ್ಯ ನಿರ್ವಹಿಸದೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಸಮರ್ಪಕ ಮಳೆಯಾಗದೆ ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿರುವುದರಿಂದ ಮಾರ್ಟಳ್ಳಿ ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದೆ. ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆ ಮಾಡಿದರೆ ಸಮಸ್ಯೆ ಬಗೆಹರಿಯಲಿದೆ. ಇದಲ್ಲದೆ ಕಾವೇರಿ ನದಿ ಮೂಲದಿಂದ ಪ್ರಮುಖ ಕೆರೆಗಳಿಗೆ ನೀರು ತುಂಬಿಸಿದರೆ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂಬುವುದು ಪ್ರಜ್ಞಾವಂತ ನಾಗರಿಕರ ಮನವಿಯಾಗಿದೆ.

ಸಮರ್ಪಕ ಮಳೆಯಾಗದೇ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಈಗಾಗಲೇ ವೆಳ್ಳಾರಿ ಬೋರೆ ಹಾಗೂ ಏರಿಕಾಡ್ ಗ್ರಾಮಗಳಿಗೆ ಮಿನಿ ನೀರಿನ ಟ್ಯಾಂಕ್ ನೀಡಿರುವ ಸಂಪರ್ಕದ ಮೂಲಕವೇ ಸಾರ್ವಜನಿಕ ನಲ್ಲಿಗಳನ್ನು ಇಟ್ಟು ಸಮಸ್ಯೆಯನ್ನು ಬಗೆಹರಿಸಲು ಕ್ರಮ ವಹಿಸಲಾಗಿದೆ ಎಂದು ಹನೂರು ಗ್ರಾಮ ಪಂಚಾಯಿತಿ ಇಓ ಉಮೇಶ್‌ ಹೇಳಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…

8 mins ago

ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ: ಸಚಿವ ಮಧುಬಂಗಾರಪ್ಪ

ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…

12 mins ago

ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ

ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…

19 mins ago

ಹನೂರು: ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿಸಲಗ ದಾಂಧಲೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…

1 hour ago

ಕಾನೂನು ಸುವ್ಯವಸ್ಥೆಗೂ ಜಿಡಿಪಿಗೂ ನೇರ ಸಂಬಂಧವಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…

2 hours ago

ಹಾಸನ: ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಕಾರು

ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…

3 hours ago