Student goes missing
ಕೊಳ್ಳೇಗಾಲ: ತಾಲ್ಲೂಕಿನ ಶಿವನಸಮುದ್ರದ ದರ್ಗಾದ ಹಿಂಭಾಗದ ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ನಾಲ್ವರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಮೂವರನ್ನು ಅಗ್ನಿಶಾಮಕ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದು, ಓರ್ವ ವಿದ್ಯಾರ್ಥಿ ನಾಪತ್ತೆಯಾಗಿದ್ದಾನೆ.
ಬೆಂಗಳೂರು ಮೂಲದ ಮೆಡಿಕಲ್ ಕಾಲೇಜೊಂದರಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಇಂದು ಪ್ರವಾಸದ ನಿಮಿತ್ತ ಶಿವನಸಮುದ್ರಕ್ಕೆ ಆಗಮಿಸಿದ್ದರು. ಈ ಸಂದರ್ಭ ನಾಲ್ವರು ವಿದ್ಯಾರ್ಥಿಗಳು ನದಿಗೆ ಈಜಲು ಇಳಿದು ಈಜಲು ಸಾಧ್ಯವಾಗದೆ ಪರದಾಡುತ್ತಿದ್ದರು.
ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ತಕ್ಷಣ ಕೊಳ್ಳೇಗಾಲ ಅಗ್ನಿಶಾಮಕ ಠಾಣಾಧಿಕಾರಿ ಅರುಣ್ ಕುಮಾರ್ ಅವರ ನೇತೃತ್ವದ ತಂಡವೊಂದು ಸ್ಥಳಕ್ಕೆ ಧಾವಿಸಿ, ಪ್ರಫುಲ್ಲಾ, ತುಷಾರಾ ಮತ್ತು ಪ್ರಮೋದ್ ಎಂಬ ಮೂವರನ್ನು ರಕ್ಷಣೆ ಮಾಡಿದ್ದಾರೆ. ಆದರೆ ನಂದಕುಮಾರ್ ಎಂಬ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ಈ ಸಂಬಂಧ ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…