ಹನೂರು :ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ತೀರ್ಪುಗಾರರು ಇಲ್ಲದೆ ಕ್ರೀಡಾಕೂಟವನ್ನು ಗುರುವಾರಕ್ಕೆ ಮುಂದೂಡಿದ್ದರಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಆಕೋಶ ಹೊರ ಹಾಕಿದ್ದಾರೆ.
ಶಾಲಾ ಶಿಕ್ಷಣ ಇಲಾಖೆ ಹಾಗೂ ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು, ಜೆಎಸ್ಎಸ್ ಪದವಿ ಪೂರ್ವ ಕಾಲೇಜು ರಾಮಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ
ಜಿಲ್ಲಾ ಮಟ್ಟದ ಪದವಿ ಪೂರ್ವ ಕ್ರೀಡಾಕೂಟದಲ್ಲಿ 5 ತಾಲೂಕಿನಿಂದ ಹಲವಾರು ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು ಆದರೆ ಸ್ಪರ್ಧೆಗೆ ತಕ್ಕಂತೆ ತೀರ್ಪುಗಾರರು ಇಲ್ಲದೆ ಇರುವುದರಿಂದ ಒಂದು ದಿನಕ್ಕೆ ಮುಗಿಯುಬೇಕಿದ್ದ ಕ್ರೀಡಾಕೂಟ ಎರಡನೇ ದಿನಕ್ಕೆ ಮುಂದೂಡಲಾಗಿದೆ. ಇದರಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ವಾಸ್ತವ್ಯಕ್ಕೆ ಸಮರ್ಪಕ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಇಲ್ಲದೆ ಪಂದ್ಯವನ್ನು ನಾಳೆಗೆ ಮುಂದೂಡಿದರೆ ನಾವು ಯಾವ ರೀತಿ ಮತ್ತೆ ಬರಲು ಸಾಧ್ಯ, ನೀವು ಕ್ರೀಡಾಕೂಟವನ್ನು ಬುಧವಾರವೇ ಮುಗಿಸಬೇಕು ಎಂದು ಆಟಗಾರರು ಹಾಗೂ ಕ್ರೀಡಾಭಿಮಾನಿಗಳು ಕ್ರೀಡಾಕೂಟ ಆಯೋಜನೆ ಮಾಡಿದ್ದ ಸಂಸ್ಥೆಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ವಿವೇಕಾನಂದ ಸಂಸ್ಥೆಯ ಪ್ರಾಂಶುಪಾಲ ಮಧುಸೂಧನ್ ರವರು ಸಮಯದ ಅಭಾವದಿಂದ ಈ ರೀತಿಯಾಗಿದೆ .ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಸಮಾಧಾನಪಡಿಸಿದರು ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶವಾಗಿ ಹೊರ ನಡೆದ ಘಟನೆ ಜರುಗಿದೆ.
ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…