ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ಯಶಸ್ವಿಗೆ ಜಿಲ್ಲಾಧಿಕಾರಿ ಸಿಟಿ ಶಿಲ್ಪಾ ನಾಗ್ ರವರಿಗೆ ಪ್ರಾಧಿಕಾರದ ಕಾರ್ಯದರ್ಶಿ ಎಈ ರಘು ಬಲಗೈ ಬಂಟನಂತೆ ಹಗಲಿರುಳು ಕಾರ್ಯನಿರ್ವಹಿಸಿ ಯಶಸ್ವಿಗೆ ಕಾರಣಿಭೂತರಾಗಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಏಪ್ರಿಲ್ 24ರಂದು ನಡೆದ ಸಚಿವ ಸಂಪುಟ ಸಭೆಗೆ ಕಳೆದ 15 ದಿನಗಳಿಂದ ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ವತಿಯಿಂದ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.
ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಏಪ್ರಿಲ್ 24ರಂದು ನಿಗದಿಯಾಗುತ್ತಿದ್ದಂತೆ ಜಿಲ್ಲಾಧಿಕಾರಿಗಳಾದ ರವರು ಕಾರ್ಯ ಪ್ರವೃತ್ತರಾಗಿ 20 ಸಮಿತಿಗಳು ಹಾಗೂ ಸಚಿವರು ಹಿರಿಯ ಅಧಿಕಾರಿಗಳಿಗೆ ಲೈಸಲಿಂಗ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಿದ್ದರು.
ಏಪ್ರಿಲ್ 21ರ ವರೆಗೂ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೀಪದ ಗಿರಿ ಒಡ್ಡಿನ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಆವರಣದಲ್ಲಿ ಸಚಿವ ಸಂಪುಟ ಸಭೆಗೆ ಸ್ಥಳ ನಿಗದಿ ಮಾಡಲಾಗಿತ್ತು, ಆದರೆ ತಜ್ಞರು ಎತ್ತರದ ಪ್ರದೇಶ ಆಗಿರುವುದರಿಂದ ಇಲ್ಲಿ ಸಭೆ ಮಾಡಲು ಸಾಧ್ಯವಿಲ್ಲ ಎಂದು ಅವರೇ ನೀಡಿದ್ದಾರೆ ಆದರೆ ಇದ್ಧ ಮೂರು ದಿನಗಳ ಕಾಲಾವಕಾಶದಲ್ಲಿ ವಜ್ರಮಲೆ ಭವನದ ಮುಂಭಾಗದ ತೋಟದ ಬಯಲು ಪ್ರದೇಶದಲ್ಲಿ ಮೂರು ದಿನಗಳ ಅವಧಿಯಲ್ಲಿ ಹಗಲಿರುಳು ಶ್ರಮಿಸಿ ಸಚಿವ ಸಂಪುಟ ಸಭೆ, ಮಾಧ್ಯಮ ಗೋಷ್ಠಿ ,ಊಟದ ಹಾಲ್ ಗಳನ್ನು ಪ್ರತ್ಯೇಕವಾಗಿ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾದರು.
ಜಿಲ್ಲಾಧಿಕಾರಿಗಳು ಹಾಗೂ ಪ್ರಾಧಿಕಾರಕ್ಕೆ ಶಾಸಕ ಎಂಆರ್ ಮಂಜುನಾಥ್ ರವರು ಸಹ ಎಲ್ಲ ರೀತಿಯ ಸಹಕಾರ ನೀಡಿ ಸಚಿವ ಸಂಪುಟ ಸಭೆಯ ಯಶಸ್ವಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ.
ಡಿಸಿಎಂ ಡಿಕೆ ಮೆಚ್ಚುಗೆ: ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ವತಿಯಿಂದ ಸಚಿವ ಸಂಪುಟ ಸಭೆಯ ಎಲ್ಲಾ ರೀತಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವಗಳಿಗಿಂತಲೂ ವಿಭಿನ್ನವಾಗಿ ಆಕರ್ಷಕ ವಿದ್ಯುತ್ ದೀಪ ಅಲಂಕಾರ, ಸ್ವಾಗತ ಕಮಾನು, ರಾಜಗೋಪುರ ಮಾದರಿಯಲ್ಲಿ ವಿಶಿಷ್ಟವಾಗಿ ಮಾಡಲಾಗಿದ್ದ ಬ್ಯಾನರ್ ನೋಡುಗರ ಕಣ್ಮನ ಸೆಳೆಯುತ್ತಿತ್ತು. ಇವೆಲ್ಲವನ್ನೂ ನೋಡಿ ಡಿಸಿಎಂ ಡಿಕೆ ಶಿವಕುಮಾರ್ ರವರು ಜಿಲ್ಲಾಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಒಟ್ಟಾರೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆದ ಐತಿಹಾಸಿಕ ಸಚಿವ ಸಂಪುಟ ಸಭೆ ಒಟ್ಟಾರೆ ಯಶಸ್ವಿಯಾಗಿದೆ. ಈ ಸಭೆಯ ಯಶಸ್ವಿಗೆ ಹಗಲಿರುಳು ಶ್ರಮಿಸಿದ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರಿಗೂ ಸಾರ್ವಜನಿಕರು ಪ್ರಸಂಶ ವ್ಯಕ್ತಪಡಿಸಿದ್ದಾರೆ.