Mysore
15
broken clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಂಪತಿ

ಕೊಳ್ಳೇಗಾಲ: ಕಳೆದ ತಿಂಗಳಷ್ಟೆ ಮದುವೆಾಂಗಿದ್ದ ನವದಂಪತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಕೊಳ್ಳೇಗಾಲ ನಗರಸಭೆ ವ್ಯಾಪ್ತಿಗೆ ಬರುವ ಬಾಪುನಗರದಲ್ಲಿ ಜರುಗಿದೆ.
ಚಿನ್ನದಂಗಡಿ ಬೀದಿಯಲ್ಲಿ  ಚಿನ್ನ ಪಾಲಿಷ್ ಮಾಡುವ ಕೆಲಸ ಮಾಡುತ್ತಿದ್ದ ಶರತ್ ಮತ್ತು ಆತನ ಪತ್ನಿ ಚಂದನಾ ಆತ್ಮಹತ್ಯೆಗೆ ಯತ್ನಿಸಿದವರು.

ಅಂಗಡಿಯಲ್ಲಿ  ಚಿನ್ನಕ್ಕೆ ಪಾಲಿಷ್ ಹಾಕುವ ಸಯನೈಡ್ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.   ವಿಚಾರ ತಿಳಿದ ಆತನ ಪತ್ನಿ ಚಂದನಾ ಬಾಪುನಗರದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆಯತ್ನಿಸಿದ್ದಾರೆ. ಶರತ್ ಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ  ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಂದನಾ ಅವರನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಇವರಿಬ್ಬರಿಗೆ ಕಳೆದ ತಿಂಗಳಷ್ಟೆ ಮದುವೆಯಾಗಿತ್ತು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!