ಚಾಮರಾಜನಗರ: ಹಾಸ್ಟೆಲ್ ಅಡುಗೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನ ಬಿಸಿಎಂ ಹಾಸ್ಟೆಲ್‌ನಲ್ಲಿ ನಡೆದಿದೆ.
28 ವರ್ಷದ ಪ್ರಮೋದ ಎಂಬುವವರೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾರೆ.
ಮೂಲತಃ ಚಾಮರಾಜನಗರದ ಸಾಗಡೆ ಗ್ರಾಮದ ನಿವಾಸಿಯಾಗಿರುವ ಪ್ರಮೋದ್ ಅವರು, ಹಲವು ದಿನಗಳಿಂದ ಹಾಸ್ಟೆಲ್‌ನಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದರು.
ಆದರೆ ಇದ್ದಕ್ಕಿದ್ದಂತೆ ಹಾಸ್ಟೆಲ್‌ನ ರೂಮ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಬೇಗೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತನಿಖೆ ಬಳಿಕವೇ ಸತ್ಯಾಸತ್ಯತೆ ಹೊರಬರಲಿದ್ದು, ಸದ್ಯ ಮೃತದೇಹವನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.