ಚಾಮರಾಜನಗರ: ಹನೂರು ತಾಲ್ಲೂಕಿನ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಪ್ರಮುಖ ಆರೋಪ ಇಮ್ಮಡಿ ಮಹದೇವಸ್ವಾಮಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದು, ಇಂದು(ನವೆಂಬರ್.18) ಹೈಕೋರ್ಟ್ ಮಂಜೂರು ಮಾಡಿರುವ ಜಾಮೀನು ಪ್ರತಿಯನ್ನು ಸಲ್ಲಿಸಲು ಚಾಮರಾಜನಗರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಇಮ್ಮಡಿ ಮಹದೇವಸ್ವಾಮಿ ಕಾವಿ ಧರಿಸದೇ ಶ್ವೇತ ವಸ್ತ್ರಧಾರಿಯಾಗಿ ಕೋರ್ಟ್‌ಗೆ ಆಗಮಿಸಿ, ಜಾಮೀನು ಪ್ರತಿಯನ್ನು ಸಲ್ಲಿಸಿದರು.
ಆರೋಪಿ ಇಮ್ಮಡಿ ಮಹದೇವಸ್ವಾಮಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ತಕ್ಷಣವೇ ವೈದ್ಯಕೀಯ ಚಿಕಿತ್ಸೆಗಾಗಿ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.
ಕಳೆದ 2028ರ ಡಿಸೆಂಬರ್.14ರಂದು ಹನೂರು ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದಲ್ಲಿ ದೇವರ ಪ್ರಸಾದಕ್ಕೆ ಸುಳ್ವಾಡಿ ಮಹದೇವಸ್ವಾಮಿ ವಿಷ ಬೆರೆಸಿದ್ದರು. ಅದನ್ನು ತಿಂದು 17 ಮಂದಿ ಸಾವನ್ನಪ್ಪಿದ್ದರು. 123ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು. ಪ್ರಕರಣದ ಪ್ರಮುಖ ಆರೋಪಿ ಇಮ್ಮಡಿ ಮಹದೇವಸ್ವಾಮಿ ಕಳೆದ 2018ರಿಂದಲೂ ಮೈಸೂರು ಕಾರಾಗೃಹದಲ್ಲಿ ವಿಚಾರಣಾ ಕೈದಿಯಾಗಿದ್ದರು.





