ಚಾಮರಾಜನಗರ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಇಮ್ಮಡಿ ಮಹದೇವಸ್ವಾಮಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್ ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು ನೀಡಿದೆ.
ಇದನ್ನು ಓದಿ: ಸುಳ್ವಾಡಿ ವಿಷ ಪ್ರಸಾದ; ಹಸನಾಗದ ಸಂತಸ್ತರ ಬದುಕು
ಕಳೆದ 2018ರ ಡಿಸೆಂಬರ್.14ರಂದು ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಆಡಳಿತದ ಚುಕ್ಕಾಣಿ ಹಿಡಿಯಲು ಹುನ್ನಾರ ನಡೆಸಿದ್ದ ಇಮ್ಮಡಿ ಮಹದೇವಸ್ವಾಮಿ ಪ್ರಸಾದಕ್ಕೆ ವಿಷ ಬೆರೆಸಿದ್ದನು. ವಿಷ ಪ್ರಸಾದ ಸೇವಿಸಿ 17 ಜನ ಮೃತಪಟ್ಟು, 123ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.
ಪ್ರಕರಣ ಸಂಬಂಧ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಕಳೆದ ಏಳು ವರ್ಷಗಳಿಂದ ಜೈಲಿನಲ್ಲಿದ್ದ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದ ಮಹದೇವಸ್ವಾಮಿಗೆ ಒಂದು ವರ್ಷದ ಅವಧಿಗೆ ಜಾಮೀನು ಮಂಜೂರು ಮಾಡಲಾಗಿದೆ.




