ಚಾಮರಾಜನಗರ

ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ: ಎ.1 ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಷರತ್ತುಬದ್ಧ ಜಾಮೀನು

ಚಾಮರಾಜನಗರ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಇಮ್ಮಡಿ ಮಹದೇವಸ್ವಾಮಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್‌ ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು ನೀಡಿದೆ.

ಇದನ್ನು ಓದಿ: ಸುಳ್ವಾಡಿ ವಿಷ ಪ್ರಸಾದ; ಹಸನಾಗದ ಸಂತಸ್ತರ ಬದುಕು

ಕಳೆದ 2018ರ ಡಿಸೆಂಬರ್.‌14ರಂದು ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ಆಡಳಿತದ ಚುಕ್ಕಾಣಿ ಹಿಡಿಯಲು ಹುನ್ನಾರ ನಡೆಸಿದ್ದ ಇಮ್ಮಡಿ ಮಹದೇವಸ್ವಾಮಿ ಪ್ರಸಾದಕ್ಕೆ ವಿಷ ಬೆರೆಸಿದ್ದನು. ವಿಷ ಪ್ರಸಾದ ಸೇವಿಸಿ 17 ಜನ ಮೃತಪಟ್ಟು, 123ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದರು.

ಪ್ರಕರಣ ಸಂಬಂಧ ಎ1 ಆರೋಪಿ ಇಮ್ಮಡಿ ಮಹದೇವಸ್ವಾಮಿ ಕಳೆದ ಏಳು ವರ್ಷಗಳಿಂದ ಜೈಲಿನಲ್ಲಿದ್ದ. ಆದರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹೈಕೋರ್ಟ್‌ ಮೊರೆ ಹೋಗಿದ್ದ ಮಹದೇವಸ್ವಾಮಿಗೆ ಒಂದು ವರ್ಷದ ಅವಧಿಗೆ ಜಾಮೀನು ಮಂಜೂರು ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು| ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆ

ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…

10 mins ago

ಮೈಶುಗರ್‌ ಶಾಲಾ ಶಿಕ್ಷಕರಿಗೆ ನೆರವಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್‌ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…

35 mins ago

ಸಮಾನತೆ ತರಲೆಂದೇ ಗ್ಯಾರಂಟಿ ಯೋಜನೆಗೆ ಕೋಟಿಗಟ್ಟಲೇ ಹಣ ಖರ್ಚಿ ಮಾಡ್ತಿರೋದು: ಸಿಎಂ ಸಿದ್ದರಾಮಯ್ಯ

ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…

1 hour ago

ಟಿಬಿ ಡ್ಯಾಂ ಕ್ರಸ್ಟ್‌ ಗೇಟ್‌ ಅಳವಡಿಕೆಗೆ ಚಾಲನೆ

ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್‌ ಗೇಟ್‌ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್‌ ಮುಂದೆ…

2 hours ago

ಮೈಸೂರು| ಮದುವೆ ಆಗುವುದಾಗಿ ನಂಬಿಸಿ ವಕೀಲೆಗೆ ಮೋಸ

ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…

2 hours ago

ಪುರಾವೆ ಇಲ್ಲದೇ ಯಾರ ಮೇಲೂ ತನಿಖೆ ಮಾಡಲ್ಲ: ಬಿ.ವೈ.ವಿಜಯೇಂದ್ರ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…

2 hours ago