Mysore
23
haze

Social Media

ಗುರುವಾರ, 11 ಡಿಸೆಂಬರ್ 2025
Light
Dark

ಚಾಮರಾಜನಗರ ಸಂಸದರಾಗಿ ಸುನೀಲ್‌ ಬೋಸ್‌ ಪ್ರಮಾಣವಚನ ಸ್ವೀಕಾರ

ನವದೆಹಲಿ: 18 ನೇ ಲೋಕಸಭೆಯ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಿದ್ದು,  ಲೋಕಸಭೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿ ಸುನೀಲ್‌ ಬೋಸ್‌ ಹಂಗಾಮಿ ಸ್ಪೀಕರ್‌ ಭರ್ತೃಹರಿ ಅವರಿಂದ ಪ್ರಮಾಣವಚನ ಸ್ವೀಕರಿಸಿದರು.

ಸುನೀಲ್‌ ಬೋಸ್‌ ಅವರು ಮಾತೃ ಭಾಷೆ ಕನ್ನಡದಲ್ಲಿಯೇ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.

ನನ್ನನ್ನು ದೊಡ್ಡ ಅಂತರದಿಂದ ಆಯ್ಕೆಮಾಡಿ ಸಾರ್ವಜನಿಕ ಸೇವೆಗೆ ಅವಕಾಶ ಮಾಡಿಕೊಟ್ಟ ಚಾಮರಾಜನಗರದ ಲೋಕಸಭಾ ಕ್ಷೇತ್ರದ ಮತದಾರರ ಬಂಧುಗಳಿಗೆ ಹೃದಯಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ತಮ್ಮ ಎಕ್ಸ್‌ ಖಾತೆಯನ್ನು ಬರೆದುಕೊಂಡಿದ್ದಾರೆ.

Tags:
error: Content is protected !!