ಚಾಮರಾಜನಗರ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಚಾ.ನಗರ ಲೋಕಸಭಾ ಸದಸ್ಯ ಸುನಿಲ್ ಬೋಸ್ ಅವರು ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಭಾಗದ ಹೆದ್ದಾರಿ ಕಾಮಗಾರಿಗಳು ಹಾಗೂ ಚತುಷ್ಪಥ ರಸ್ತೆ ಸಂಬಂಧವಾಗಿ ಮಾತನಾಡಿ ಮನವಿ ಸಲ್ಲಿಸಿದರು. ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಬಳಿಯ ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದ ಪದೇ ಪದೇ ಅಪಘಾತ ಆಗುತ್ತಿರುವ ವಿಚಾರವನ್ನು ಸಚಿವರ ಗಮನಕ್ಕೆ ತಂದರು.
ಮೈಸೂರು-ಹೆಚ್.ಡಿ.ಕೋಟೆವರೆಗೆ ಚತುಷ್ಪಥ ರಸ್ತೆಯನ್ನು ನಿರ್ಮಾಣ ಮಾಡುವಂತೆ ನಿತಿನ್ ಗಡ್ಕರಿ ಅವರಲ್ಲಿ ಸಂಸದರು ಇದೇ ವೇಳೆ ಮನವಿ ಮಾಡಿದರು.





