ಚಾಮರಾಜನಗರ

ಮೌಢ್ಯಗಳು ಸಮಾಜದ ಪ್ರಗತಿಗೆ ಮಾರಕ : ಸಿಎಂ

ಚಾಮರಾಜನಗರ : ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಇಂತಹ ಮೌಢ್ಯಗಳೇ ಸಮಾಜದ ಪ್ರಗತಿಗೆ ಮಾರಕವಾಗಿದೆ. ನಾನು ಇದುವರೆಗೆ ಸುಮಾರು 20 ಬಾರಿ ಜಿಲ್ಲೆಗೆ ಬಂದಿದ್ದು, ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇಂದು ಶ್ರೀ ಮಲೆ ಮಹದೇಶ್ವರ ಬೆಟ್ಟದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ವಿಭಾಗದ ಚಾಮರಾಜನಗರ ಜಿಲ್ಲೆ ಹಿಂದುಳಿದ ಜಿಲ್ಲೆಯಾಗಿದ್ದು, ಈ ಭಾಗಕ್ಕೆ ವಿಶೇಷ ಗಮನ ನೀಡುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದೆ ಎಂದರು.

ಮಲೆಮಹದೇಶ್ವರ ಅಭಿವೃದ್ಧಿಗೆ ನಿರ್ಣಯ :
ಮಲೆಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ಸಭೆ ನಿನ್ನೆ ನಡೆಸಲಾಗಿದೆ. ಈ ಪ್ರದೇಶದಲ್ಲಿ ಶುಚಿತ್ವ ಕಾಯ್ದುಕೊಳ್ಳಬೇಕು, ಮದ್ಯನಿಷೇದವಾಗಬೇಕು, ದೇವಸ್ಥಾನದ ವಿತರಿಸಲಾಗುವ ಲಾಡು ಪ್ರಸಾದವನ್ನು ಗುಣಮಟ್ಟದಲ್ಲಿ ಹಾಗೂ ಕಡಿಮೆ ದರದಲ್ಲಿ ನೀಡುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಮಲೈಮಹದೇಶ್ವರ ಸನ್ನಿಧಿಯ ಸುತ್ತಮುತ್ತಲ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಪಡಿಸಬೇಕೆಂದು ನಿರ್ಣಯಿಸಲಾಗಿದೆ ಎಂದರು.

ಬಿಜೆಪಿಯವರ ಮೇಲೆ ಇಡಿ ದಾಳಿ ಆಗುವುದಿಲ್ಲ:
ಶಾಸಕ ವಿನಯ್ ಕುಲಕರ್ಣಿಯವರ ಮನೆಯ ಮೇಲೆ ಇಡಿ ದಾಳಿಯಾಗಿರುವ ಬಗ್ಗೆ, ಕೇಂದ್ರ ಸರ್ಕಾರ ದ್ವೇಷದ ರಾಜಕಾರಣಕ್ಕಾಗಿ ಜಾರಿ ನಿರ್ದೇಶನಾಲಯವನ್ನು ಬಳಸಿಕೊಳ್ಳುತ್ತಿದೆ. ಬಿಜೆಪಿಯವರ ಮೇಲೆ ಯಾವುದೇ ಇಡಿ ದಾಳಿ ಆಗುವುದಿಲ್ಲ.

ಪ್ರಧಾನಿ ಮೋದಿಯವರು ಕಾಶ್ಮೀರ ಉಗ್ರರ ದಾಳಿಗೆ ತಕ್ಕ ಪ್ರತ್ಯುತ್ತರ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ದಾಳಿಯಲ್ಲಿ ಕೇಂದ್ರ ಗುಪ್ತಚರ ಇಲಾಖೆಯ ವೈಫಲ್ಯವಿರುವುದು ಕಾಣುತ್ತಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

12 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

13 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

13 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

13 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

13 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

13 hours ago