ಚಾಮರಾಜನಗರ

ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ಶಾಸಕ ಎಂ.ಆರ್.‌ಮಂಜುನಾಥ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆ ಆವರಣದಲ್ಲಿ ಕುಡಿಯುವ ನೀರಿನ ಸಂಬಂಧ ಕರೆಯಲಾಗಿದ್ದ ಪಿಡಿಒಗಳ ಸಭೆಯಲ್ಲಿ ಅವರು ಮಾತನಾಡಿದರು.

ಹನೂರು ತಾಲ್ಲೂಕಿನ ಹುತ್ತೂರು, ಮಲೆ ಮಹದೇಶ್ವರ ಬೆಟ್ಟ, ಮಾರ್ಟಳ್ಳಿ, ಕುರಟ್ಟಿ ಹೊಸೂರು, ಶೆಟ್ಟಳ್ಳಿ, ಕೌದಳ್ಳಿ, ಪಿ ಜಿ ಪಾಳ್ಯ, ಎಲ್ಲೇಮಾಳ ಅಜ್ಜೀಪುರ, ರಾಮಾಪುರ, ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದೆ. ಗ್ರಾಮಗಳ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ತಡವಾದರೂ ಕುಡಿಯುವ ನೀರಿಗೆ ಮೊದಲೇ ಆದ್ಯತೆ ನೀಡಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕು. ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೆ ರೀ ಬೋರ್ ಕೊರೆಸಿ ಸಮಸ್ಯೆಯನ್ನು ಬಗೆಹರಿಸಬೇಕು ಅಗತ್ಯವಿದ್ದರೆ ಮಾತ್ರ ಕೊಳವೆಬಾವಿಗಳನ್ನು ಕೊರೆಸಿ ನೀರು ಪೂರೈಕೆ ಮಾಡಬೇಕು ಎಂದರು.

ಕೊಳವೆಬಾವಿ ಕೊರೆಸಿ ನೀರು ಬಾರದಿದ್ದರೆ ಅಂತಹ ಗ್ರಾಮಗಳಲ್ಲಿ ಖಾಸಗಿ ಬೋರ್ ಗಳ ಮುಖಾಂತರ ನೀರು ಪಡೆದು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ನಿವಾಸಿಗಳಿಗೆ ಕುಡಿಯುವ ನೀರು ಪೂರೈಕೆ ಮಾಡಬೇಕು. ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಾರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದರು.

ಕೊಳವೆಬಾವಿ ಕೊರೆಸಿರುವ ಗ್ರಾಮ ಪಂಚಾಯಿತಿಗಳಲ್ಲಿ ಅನುದಾನವಿದ್ದರೆ ಅತಿ ಶೀಘ್ರದಲ್ಲಿಯೇ ಬೋರ್ವೆಲ್ ಲಾರಿ ಮಾಲೀಕರಿಗೆ ಅನುದಾನ ನೀಡಬೇಕು, ಒಂದೊಮ್ಮೆ ಅನುದಾನ ಇಲ್ಲದಿದ್ದರೆ ನನ್ನ ಗಮನಕ್ಕೆ ತಂದರೆ, ಸಮಸ್ಯೆಯನ್ನು ಬಗೆಹರಿಸುವುದಾಗಿ ತಿಳಿಸಿದರು.

ಇದೆ ವೇಳೆ ತಹಸಿಲ್ದಾರ್ ಚೈತ್ರ, ಇಒ ಉಮೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಸುಧನ್ವ ನಾಗ್, ವ್ಯವಸ್ಥಾಪಕ ರಮೇಶ್, ಕಾರ್ಯಪಾಲಕ ಅಭಿಯಂತರ ಶಶಿಕುಮಾರ್, ಪಿಡಿಒಗಳಾದ ಸುರೇಶ್, ಕಿರಣ್, ರಾಮು, ರಾಜು, ಮಾದೇಶ್, ನಂಜುಂಡಸ್ವಾಮಿ, ಪುಷ್ಪಲತಾ, ಗಂಗಾಧರ್, ರಾಜೇಶ್, ಸಿದ್ದಪ್ಪ, ಡಾ ಶಿವಣ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

39 mins ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

46 mins ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

3 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

4 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

4 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

4 hours ago