Mysore
33
scattered clouds

Social Media

ಗುರುವಾರ, 21 ಮೇ 2026
Light
Dark

ತಮಿಳುನಾಡು ವಿಧಾನಸಭಾ ಚುನಾವಣೆ: ಗಡಿಭಾಗದ ಚೆಕ್ ಪೋಸ್ಟ್‌ಗಳಿಗೆ ಡಿವೈಎಸ್ಪಿ ಭೇಟಿ, ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು 

ಹನೂರು : ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯದ ಗಡಿ ಚೆಕ್ ಪೋಸ್ಟ್‌ಗಳಿಗೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಂತರ ಮಾತನಾಡಿದ ಅವರು ಪ್ರತಿನಿತ್ಯ ಕರ್ನಾಟಕದಿಂದ ತಮಿಳುನಾಡಿಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ವಾಹನಗಳಲ್ಲಿ ಆಕ್ರಮ ಮದ್ಯ ಸಾಗಣೆ, ಅಕ್ರಮ ಹಣ ಸಾಗಣೆ ಗೃಹಪಯೋಗಿ ವಸ್ತುಗಳು ಸಾಗಾಟವಾಗದಂತೆ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಎಚ್ಚರ ವಹಿಸಬೇಕು. ಯಾವುದಾದರೂ ವಿಚಾರದ ಬಗ್ಗೆ ನಿಮಗೆ ಅನುಮಾನವಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಕಡ್ಡಾಯವಾಗಿ ಪ್ರತಿಯೊಂದು ವಾಹನಗಳ ಸಂಖ್ಯೆ ಹಾಗೂ ಸಮಯವನ್ನು ನಮೂದು ಮಾಡಬೇಕು ಎಂದು ಸಲಹೆ ನೀಡಿದರು.

ಪರಿಶೀಲನೆ ವೇಳೆ ಹನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದಮೂರ್ತಿ ಹಾಗೂ ಅರ್ಧನಾರಿಪುರ ಚೆಕ್‌ಪೋಸ್ಟ್‌ ಸಿಬ್ಬಂದಿ ವರ್ಗದವರು ಹಾಜರಿದ್ದರು.

Tags:
error: Content is protected !!