ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು : ನೆರೆಯ ತಮಿಳುನಾಡು ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ನೀತಿ ಸಂಹಿತೆ ಇರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯದ ಗಡಿ ಚೆಕ್ ಪೋಸ್ಟ್‌ಗಳಿಗೆ ಕೊಳ್ಳೇಗಾಲ ಉಪ ವಿಭಾಗದ ಡಿವೈಎಸ್ಪಿ ಧರ್ಮೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಮಾತನಾಡಿದ ಅವರು ಪ್ರತಿನಿತ್ಯ ಕರ್ನಾಟಕದಿಂದ ತಮಿಳುನಾಡಿಗೆ ಸಂಚರಿಸುವ ಎಲ್ಲಾ ಮಾದರಿಯ ವಾಹನಗಳನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಬೇಕು. ವಾಹನಗಳಲ್ಲಿ ಆಕ್ರಮ ಮದ್ಯ ಸಾಗಣೆ, ಅಕ್ರಮ ಹಣ ಸಾಗಣೆ ಗೃಹಪಯೋಗಿ ವಸ್ತುಗಳು ಸಾಗಾಟವಾಗದಂತೆ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಎಚ್ಚರ ವಹಿಸಬೇಕು. ಯಾವುದಾದರೂ ವಿಚಾರದ ಬಗ್ಗೆ ನಿಮಗೆ ಅನುಮಾನವಿದ್ದರೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು. ಕಡ್ಡಾಯವಾಗಿ ಪ್ರತಿಯೊಂದು ವಾಹನಗಳ ಸಂಖ್ಯೆ ಹಾಗೂ ಸಮಯವನ್ನು ನಮೂದು ಮಾಡಬೇಕು ಎಂದು ಸಲಹೆ ನೀಡಿದರು.
ಪರಿಶೀಲನೆ ವೇಳೆ ಹನೂರು ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆನಂದಮೂರ್ತಿ ಹಾಗೂ ಅರ್ಧನಾರಿಪುರ ಚೆಕ್‌ಪೋಸ್ಟ್ ಸಿಬ್ಬಂದಿ ವರ್ಗದವರು ಹಾಜರಿದ್ದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…