Mysore
20
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಟಾಟಾ ಏಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ ದೊಡ್ಡತುಪ್ಪೂರು ಬಂಕ್ ಬಳಿ ನಡೆದಿದೆ.

ಬೈಕ್ ಸವಾರ, ತಾಲ್ಲೂಕಿನ ಕೆಲಸೂರು ಗ್ರಾಮದ ನಂಜನಾಯಕ ಮೃತಪಟ್ಟವರು.

ಗುಂಡ್ಲುಪೇಟೆ ಕಡೆಯಿಂದ ತೆರಳುತ್ತಿದ್ದ ಟಾಟಾ ಏಸ್ ವಾಹನ ದೊಡ್ಡತುಪ್ಪೂರು ಬಂಕ್ ಬಳಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ತಲೆಗೆ ತೀವ್ರ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಾಟಾ ಏಸ್ ನಲ್ಲಿ ತೆರಳುತ್ತಿದ್ದವರಿಗೆ ಯಾವುದೇ ರೀತಿಯ ಅಪಾಯವಾಗಿಲ್ಲ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಗುಂಡ್ಲುಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಮುಂದಿನ ಕ್ರಮ ಕೈಗೊಂಡಿದ್ದಾರೆ.

 

Tags:
error: Content is protected !!