ಚಾಮರಾಜನಗರ

ಅನುಮತಿ ಪಡೆಯದೆ ತೇಗದ ಮರ ಸಂಗ್ರಹ: ಅರಣ್ಯ ಇಲಾಖೆಯಿಂದ ಜಪ್ತಿ

ಗುಂಡ್ಲುಪೇಟೆ : ಅಕ್ರಮವಾಗಿ ಕೊಯ್ದು ಸಂಗ್ರಹಿಸಿದ್ದ ತೇಗದ ಮರಗಳನ್ನು ಅರಣ್ಯ ಇಲಾಖೆಯು ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಅಣ್ಣೂರು ಗ್ರಾಮದ ಜಮೀನಿನಲ್ಲಿ ನಡೆದಿದೆ.

ತಾಲ್ಲೂಕಿನ ಅಣ್ಣೂರು ಕೇರಿ ಗ್ರಾಮದ ಸುನಿಲ್‌ರವರ ಜಮೀನಿನಲ್ಲಿ ಮಾದಪ್ಪ ಎಂಬವರು ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಬೇರೆಡೆ ತೇಗದ ಮರಗಳನ್ನು ಖರೀದಿಸಿ ಕೊಯ್ದು ಸಂಗ್ರಹಿಸಿಟ್ಟಿದ್ದರು. ಇದರ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್ ವಲಯ ಅರಣ್ಯಾಧಿಕಾರಿ ಶಿವಕುಮಾರ್ ಮತ್ತು ಸಿಬ್ಬಂದಿ ದಾಳಿ ನಡೆಸಿ, ಸಂಗ್ರಹಿಸಿದ್ದ ತೇಗದ ಮರಗಳನ್ನು ಜಪ್ತಿ ಮಾಡಿದ್ದಾರೆ.

ಅನುಮತಿ ಪಡೆಯದ ಹಿನ್ನೆಲೆಯಲ್ಲಿ 10ಕ್ಕೂ ಅಧಿಕ ತೇಗದ ಮರಗಳನ್ನು ಜಪ್ತಿ ಮಾಡಲಾಗಿದ್ದು, ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಬಫರ್ ಜೊನ್ ವಲಯ ಅರಣ್ಯಧಿಕಾರಿ ಶಿವಕುಮಾರ್ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

7 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

7 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

13 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

13 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

13 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

13 hours ago