Mysore
20
scattered clouds

Social Media

ಸೋಮವಾರ, 26 ಜನವರಿ 2026
Light
Dark

ಮಹದೇಶ್ವರ ಬೆಟ್ಟದಲ್ಲಿ ದಸರಾ ಪ್ರಯುಕ್ತ ತೆಪ್ಪೋತ್ಸವ: ಎ.ಈ.ರಘು ಮಾಹಿತಿ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯಲಿರುವ ತೆಪ್ಪೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಮನವಿ ಮಾಡಿದರು.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಂಪ್ರದಾಯಿಕವಾಗಿ ದಸರಾ ಹಬ್ಬದ ಪ್ರಯುಕ್ತ ಕಲ್ಯಾಣಿಯಲ್ಲಿ ಪ್ರತಿ ವರ್ಷ ತೆಪ್ಪೋತ್ಸವ ನಡೆಸುವುದು ವಾಡಿಕೆ. ಆದರೆ ಕಲ್ಯಾಣಿ ನವೀಕರಣ ಮಾಡುತ್ತಿದ್ದರಿಂದ ಕಳೆದ ಆರು ವರ್ಷಗಳಿಂದ ತೆಪ್ಪೋತ್ಸವ ಕಾರ್ಯಕ್ರಮ ಸ್ಥಗಿತವಾಗಿತ್ತು.

ಇದನ್ನು ಓದಿ : ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್‌ ಮುಕ್ತ ಪ್ರದೇಶವನ್ನಾಗಿ ಮಾಡಲು ಸಹಕರಿಸಿ: ಎ.ಈ.ರಘು ಮನವಿ

ಇದೀಗ ಕಲ್ಯಾಣಿ ಕಾಮಗಾರಿ ಪೂರ್ಣಗೊಂಡಿರುವುದರಿಂದ ಈ ಬಾರಿಯ ತೆಪ್ಪೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದವರಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಇದೊಂದು ಇತಿಹಾಸದಲ್ಲಿ ನೆನಪಿಟ್ಟುಕೊಳ್ಳುವ ಸಂದರ್ಭವಾಗಿದ್ದು, ಮಲೆ ಮಹದೇಶ್ವರ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Tags:
error: Content is protected !!