ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಜಯದಶಮಿ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆಯಲಿರುವ ತೆಪ್ಪೋತ್ಸವಕ್ಕೆ ಹೆಚ್ಚಿನ ಭಕ್ತಾದಿಗಳು ಆಗಮಿಸುವಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ಮನವಿ ಮಾಡಿದರು.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಂಪ್ರದಾಯಿಕವಾಗಿ ದಸರಾ ಹಬ್ಬದ ಪ್ರಯುಕ್ತ ಕಲ್ಯಾಣಿಯಲ್ಲಿ ಪ್ರತಿ ವರ್ಷ ತೆಪ್ಪೋತ್ಸವ ನಡೆಸುವುದು ವಾಡಿಕೆ. ಆದರೆ ಕಲ್ಯಾಣಿ ನವೀಕರಣ ಮಾಡುತ್ತಿದ್ದರಿಂದ ಕಳೆದ ಆರು ವರ್ಷಗಳಿಂದ ತೆಪ್ಪೋತ್ಸವ ಕಾರ್ಯಕ್ರಮ ಸ್ಥಗಿತವಾಗಿತ್ತು.
ಇದನ್ನು ಓದಿ : ಮಲೆ ಮಹದೇಶ್ವರ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ಪ್ರದೇಶವನ್ನಾಗಿ ಮಾಡಲು ಸಹಕರಿಸಿ: ಎ.ಈ.ರಘು ಮನವಿ
ಇದೀಗ ಕಲ್ಯಾಣಿ ಕಾಮಗಾರಿ ಪೂರ್ಣಗೊಂಡಿರುವುದರಿಂದ ಈ ಬಾರಿಯ ತೆಪ್ಪೋತ್ಸವವನ್ನು ವಿಜೃಂಭಣೆಯಿಂದ ನೆರವೇರಿಸಲು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದವರಿಂದ ಅಗತ್ಯ ಸಿದ್ಧತೆ ಕೈಗೊಳ್ಳಲಾಗಿದೆ. ಇದೊಂದು ಇತಿಹಾಸದಲ್ಲಿ ನೆನಪಿಟ್ಟುಕೊಳ್ಳುವ ಸಂದರ್ಭವಾಗಿದ್ದು, ಮಲೆ ಮಹದೇಶ್ವರ ಭಕ್ತಾದಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…