ಚಾಮರಾಜನಗರ: ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ.
ಕೊಳ್ಳೇಗಾಲ-ಯಳಂದೂರು ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದೆ. ಸುಮಂತ್ ಹಾಗೂ ನಿತಿನ್ ಕುಮಾರ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳಾಗಿದ್ದಾರೆ.
ಕಬ್ಬು ಸಾಗಿಸುತ್ತಿದ್ದ ಲಾರಿ ಹಾಗೂ ಟೊಮೋಟೋ ತುಂಬಿಕೊಂಡು ಹೋಗುತ್ತಿದ್ದ ಆಟೋ ನಡುವೆ ಡಿಕ್ಕಿಯಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಬ್ಬರ ಶವಗಳನ್ನು ಶವಾಗಾರಕ್ಕೆ ರವಾನೆ ಮಾಡಲಾಗಿದೆ.




