ಚಾಮರಾಜನಗರ : ನಾನು ಯಾವ ಕ್ಷೇತ್ರದಿಂದಲೂ ಟಿಕೆಟ್ ಕೇಳಿಲ್ಲ. ವರಿಷ್ಠರು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಒಂದಂತು ಸತ್ಯ. ಸೋಮಣ್ಣ ಅಭಿವೃದ್ಧಿ ಪರ. ಸೋಮಣ್ಣ ಇದ್ದರೆ ಅಭಿವೃದ್ಧಿಯಾಗುತ್ತದೆ’ ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದರು.
ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸುತ್ತೀರಿ, ಚಾಮರಾಜನಗರ ಟಿಕೆಟ್ ಖಚಿತವಾಯಿತೇ’ ಎಂದು ಮಾಧ್ಯಮಗಳ ಪ್ರಶ್ನೆಗೆ ಅದನ್ನು ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. 224 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸುವೆ. ಇದೇ ಕ್ಷೇತ್ರ ಬೇಕು ಎಂದು ಕೇಳಿಲ್ಲ. ಸ್ವಲ್ಪ ಕಾಯಿರಿ. ಇನ್ನು ಎರಡು ಗಂಟೆಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಆಗ ಗೊತ್ತಾಗುತ್ತದೆ ಎಂದು ಹೇಳಿದರು.
ಮಾದರಿ ಜಿಲ್ಲೆಯೇ ಗುರಿ: ಬಿಜೆಪಿ ರೈತ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಸೋಮಣ್ಣ, ಚಾಮರಾಜನಗರ ಅಭಿವೃದ್ಧಿಯಲ್ಲಿ ಹಿಂದುಳಿದಿರಬಹುದು. ಆದರೆ ಸ್ವಾಭಿಮಾನ, ಸಂಸ್ಕಾರದಲ್ಲಿ ಹಿಂದೆ ಬಿದ್ದಿಲ್ಲ. ಮಹದೇಶ್ವರ ಸ್ವಾಮಿ ಆಶೀರ್ವಾದ ಪಡೆದುಕೊಂಡು ಈ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವುದೇ ನನ್ನ ಗುರಿ ಎಂದರು.
ಖಚಿತವಾಯಿತೇ ಟಿಕೆಟ್?: ಸಚಿವ ಸೋಮಣ್ಣ ದಿಢೀರ್ ಆಗಿ ಮಂಗಳವಾರ ಚಾಮರಾಜನಗರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದ್ದು, ಚಾಮರಾಜನಗರ ಕ್ಷೇತ್ರದಿಂದ ಅವರಿಗೆ ಟಿಕೆಟ್ ಖಚಿತವಾಗಿದೆ ಎಂಬ ಚರ್ಚೆ ನಡೆಯುತ್ತಿದೆ. ರೈತ ಸಮಾವೇಶದಲ್ಲಿ ಸೋಮಣ್ಣ ಭಾಗಿಯಾಗುವುದು ನಿಗದಿಯಾಗಿರಲಿಲ್ಲ. ಸೋಮವಾರ ಮಧ್ಯಾಹ್ನ ಅವರ ಪ್ರವಾಸ ವೇಳಾಪಟ್ಟಿ ಬರುತ್ತಿದ್ದಂತೆಯೇ ಬಿರುಸಿನ ಚರ್ಚೆ ಆರಂಭವಾಗಿದೆ.’ವರಿಷ್ಠರು ಚಾಮರಾಜನಗರದ ಟಿಕೆಟ್ ಖಚಿತ ಪಡಿಸಿದ ನಂತರ ಸೋಮಣ್ಣ ಜಿಲ್ಲೆಗೆ ಬಂದಿದ್ದಾರೆ’ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.ಸೋಮಣ್ಣ ಅವರು ಮಹದೇಶ್ವರ ಬೆಟ್ಟಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಲಿರುವುದು ವದಂತಿಗೆ ಇನ್ನಷ್ಟು ಪುಷ್ಟಿ ನೀಡಿದೆ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…
ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ…