ಚಾಮರಾಜನಗರ

ಚಾಮರಾಜನಗರ ಜಿಲ್ಲೆಯನ್ನು ಮಾದರಿ ಜಿಲ್ಲೆ ಮಾಡುವುದೇ ಗುರಿ : ಸೋಮಣ್ಣ

ಚಾಮರಾಜನಗರ : ನಾನು ಯಾವ ಕ್ಷೇತ್ರದಿಂದಲೂ ಟಿಕೆಟ್ ಕೇಳಿಲ್ಲ. ವರಿಷ್ಠರು ಈ ಬಗ್ಗೆ‌ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಒಂದಂತು ಸತ್ಯ. ಸೋಮಣ್ಣ ಅಭಿವೃದ್ಧಿ ಪರ. ಸೋಮಣ್ಣ ಇದ್ದರೆ ಅಭಿವೃದ್ಧಿಯಾಗುತ್ತದೆ’ ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದರು.

ಚುನಾವಣೆಯಲ್ಲಿ ಎಲ್ಲಿಂದ ಸ್ಪರ್ಧಿಸುತ್ತೀರಿ, ಚಾಮರಾಜನಗರ ಟಿಕೆಟ್ ಖಚಿತವಾಯಿತೇ’ ಎಂದು ಮಾಧ್ಯಮಗಳ ಪ್ರಶ್ನೆಗೆ ಅದನ್ನು ಪಕ್ಷದ ನಾಯಕರು ತೀರ್ಮಾನ ಮಾಡುತ್ತಾರೆ. 224 ಕ್ಷೇತ್ರಗಳಲ್ಲಿ ಎಲ್ಲಿ ಬೇಕಾದರೂ ಸ್ಪರ್ಧಿಸುವೆ. ಇದೇ ಕ್ಷೇತ್ರ ಬೇಕು ಎಂದು ಕೇಳಿಲ್ಲ. ಸ್ವಲ್ಪ ಕಾಯಿರಿ‌. ಇನ್ನು ಎರಡು ಗಂಟೆಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಲಿದೆ. ಆಗ ಗೊತ್ತಾಗುತ್ತದೆ ಎಂದು ಹೇಳಿದರು.

ಮಾದರಿ ಜಿಲ್ಲೆಯೇ ಗುರಿ: ಬಿಜೆಪಿ ರೈತ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಸೋಮಣ್ಣ, ಚಾಮರಾಜನಗರ ಅಭಿವೃದ್ಧಿಯಲ್ಲಿ ಹಿಂದುಳಿದಿರಬಹುದು. ಆದರೆ ಸ್ವಾಭಿಮಾನ, ಸಂಸ್ಕಾರದಲ್ಲಿ ಹಿಂದೆ ಬಿದ್ದಿಲ್ಲ. ಮಹದೇಶ್ವರ ಸ್ವಾಮಿ ಆಶೀರ್ವಾದ ಪಡೆದುಕೊಂಡು ಈ ಜಿಲ್ಲೆಯನ್ನು ಮಾದರಿ ಜಿಲ್ಲೆಯನ್ನಾಗಿ ಮಾಡುವುದೇ ನನ್ನ ಗುರಿ ಎಂದರು.

ಖಚಿತವಾಯಿತೇ ಟಿಕೆಟ್?: ಸಚಿವ ಸೋಮಣ್ಣ ದಿಢೀರ್ ಆಗಿ ಮಂಗಳವಾರ ಚಾಮರಾಜನಗರಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದ್ದು, ಚಾಮರಾಜನಗರ ಕ್ಷೇತ್ರದಿಂದ ಅವರಿಗೆ ಟಿಕೆಟ್ ಖಚಿತವಾಗಿದೆ ಎಂಬ ಚರ್ಚೆ ನಡೆಯುತ್ತಿದೆ. ರೈತ ಸಮಾವೇಶದಲ್ಲಿ ಸೋಮಣ್ಣ ಭಾಗಿಯಾಗುವುದು ನಿಗದಿಯಾಗಿರಲಿಲ್ಲ. ಸೋಮವಾರ ಮಧ್ಯಾಹ್ನ ಅವರ ಪ್ರವಾಸ ವೇಳಾಪಟ್ಟಿ ಬರುತ್ತಿದ್ದಂತೆಯೇ ಬಿರುಸಿನ ಚರ್ಚೆ ಆರಂಭವಾಗಿದೆ.’ವರಿಷ್ಠರು ಚಾಮರಾಜನಗರದ ಟಿಕೆಟ್ ಖಚಿತ ಪಡಿಸಿದ ನಂತರ ಸೋಮಣ್ಣ ಜಿಲ್ಲೆಗೆ ಬಂದಿದ್ದಾರೆ’ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.ಸೋಮಣ್ಣ ಅವರು ಮಹದೇಶ್ವರ‌ ಬೆಟ್ಟಕ್ಕೂ ಭೇಟಿ‌ ನೀಡಿ ಪೂಜೆ ಸಲ್ಲಿಸಲಿರುವುದು ವದಂತಿಗೆ ಇನ್ನಷ್ಟು ಪುಷ್ಟಿ‌ ನೀಡಿದೆ

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago