ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.
ಬೆಂಗಳೂರು ಮೂಲದ ಹರೀಶ್(೨೮ ), ಅಭಿನಯ(೨೪) ಅಪಘಾತದಲ್ಲಿ ಗಾಯಗೊಂಡವರು.
ಬೆಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮಹದೇಶ್ವರ ಬೆಟ್ಟಕ್ಕೆ ತೆರಳುವಾಗ ಪಟ್ಟಣದ ಕೊಳ್ಳೇಗಾಲ ಮುಖ್ಯ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಹಳ್ಳವೊಂದಕ್ಕೆ ಕಾರು ಪಲ್ಟಿಯಾಗಿ ಜಖಂಗೊಂಡಿದೆ. ಅಲ್ಲದೆ ಈ ಅವಘಡದಲ್ಲಿ ಇಬ್ಬರಿಗೆ ಪೆಟ್ಟಾಗಿದ್ದು, ಅವರನ್ನು ಕಾಮಗೆರೆಯ ಹೋಲಿಕ್ರಾಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಹನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.