n mahesh former minister
ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್.ಮಹೇಶ್ ಮಾರ್ಮಿಕವಾಗಿ ನುಡಿದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಲಿತ ಮುಖ್ಯಮಂತ್ರಿ ಎಂಬುದು ಕನಸಾಗಿದೆ. ದಲಿತರು ಎಲ್ಲಿಯವರೆಗೆ ಒಂದು ಪಕ್ಷದ ವೋಟ್ ಬ್ಯಾಂಕ್ ಆಗಿರ್ತಾರೋ ಅಲ್ಲಿಯವರೆಗೂ ಸ್ಥಾನಮಾನ ಸಿಗಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರೆ ದಲಿತರು ಸಿಎಂ ಆಗ್ತಾರೆ ಅಂತ ದಲಿತರ ನಿರೀಕ್ಷೆ ಆಗಿತ್ತು. ಆದರೆ ಅದು ಸುಳ್ಳಾಗಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗ್ತಾರೆ ಅಂತ ದಲಿತರು ಕಾಂಗ್ರೆಸ್ ಬೆಂಬಲಿಸಿದರು ಎಂದು ತಿಳಿಸಿದರು.
ಪರಮೇಶ್ವರ್ ಸಿಎಂ ಆಗಿ ಬಿಡ್ತಾರೆ ಅಂತ ಅವರನ್ನು ಸೋಲಿಸಲಾಯ್ತು. ಸಿಎಂ ಮಾಡ್ಲಿ ಬಿಡ್ಲಿ ದಲಿತರು ತಮ್ಮ ವೋಟ್‌ಬ್ಯಾಂಕ್ ಅಂತ ಕಾಂಗ್ರೆಸ್ ಅಂದುಕೊಂಡಿದೆ. ಈ ಸೂಕ್ಷ್ಮ ಅರ್ಥ ಆಗುವವರೆಗೂ ದಲಿತರಿಗೆ ಸ್ಥಾನಮಾನ ಸಿಗುತ್ತೆ ಎಂಬುದು ಕೇವಲ ಭ್ರಮೆ. ದಲಿತರು ಆತ್ಮಾವಲೋಕನ ಮಾಡಿಕೊಳ್ಳಲು ಇದು ಸಕಾಲ ಎಂದು ಸಲಹೆ ನೀಡಿದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…