ಚಾಮರಾಜನಗರ

ಲಂಡನ್‌ನಲ್ಲಿ ಕಾನೂನು ಪದವಿ ಪಡೆದ ರೈತನ ಪುತ್ರಿಯ ವಿವಾಹಕ್ಕೆ ಹೊಲ‍‍‍ವೇ ಚಪ್ಪರ!

  • ಮಾವು, ಹಲಸಿನ ಮರದಡಿ ವಿವಾಹಶಾಸ್ತ್ರ
  • ಹೊಲದಲ್ಲಿ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರ ಜೂನ್ ಎರಡರಂದು ವಿವಾಹ

ಹನೂರು : ತಾಲೂಕಿನ ಮಹದೇಶ್ವರ ಬೆಟ್ಟ ವನ್ಯಧಾಮದ ನಿಸರ್ಗದ ಮಡಿಲಿನಲ್ಲಿ ಹತ್ತಾರು ಎಕರೆ ಕೃಷಿ ಭೂಮಿಯಲ್ಲಿ ಕೃಷಿ, ತೋಟಗಾರಿಕೆ , ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಾಣೆ, ರೇಷ್ಮೆ, ಪುಷ್ಪ ಹಾಗೂ ಅರಣ್ಯ ಕೃಷಿಯನ್ನು ಮಾಡುವ ಮೂಲಕ ತಮ್ಮ ಜಮೀನನ್ನು ಕೃಷಿ ಪ್ರವಾಸೋದ್ಯಮ ಕ್ಷೇತ್ರವನ್ನಾಗಿಸಿರುವ ಪ್ರಗತಿ ಪರ ರೈತರೊಬ್ಬರು ಲಂಡನ್‌ನಲ್ಲಿ ಕಾನೂನು ಪದವಿ ಪಡೆದಿರುವ ಪುತ್ರಿ ಮದುವೆಯನ್ನು ಹೊಲದಲ್ಲಿ ನಡೆಸಲಿದ್ದಾರೆ.

ರೈತ ಬರೀ ಬೆ‍ಳೆ ಬೆಳೆಯುತ್ತಾ ಕುಳಿತರೆ ಸಾಲದು, ತನ್ನ ಕೃಷಿ ಚಟುವಟಿಕೆಯನ್ನು ಪ್ರತಿಯೊಬ್ಬರಿಗೂ ಪರಿಚಯಿಸಬೇಕು. ಅದರ ಮೂಲಕ ರೈತನ ಕೃಷಿ ಭೂಮಿಯೂ ಕೃಷಿ ಪ್ರವಾಸೋದ್ಯಮ ತಾಣವಾಗಬೇಕು ಎಂಬ ಪರಿಕಲ್ಪನೆ ಹುಟ್ಟು ಹಾಕಿ, ಕಿಸಾನ್‌ ಅಗ್ರೋ ಟೂರಿಸಂ ಡೆವಲಪ್ಮೆಂಟ್‌ ಕಂಪನಿ ಮೂಲಕ ರೈತರನ್ನು ಕೃಷಿ
ಪ್ರವಾಸೋದ್ಯಮಿಗಳಾಗಿಸಲು ಹೊರಟಿರುವ ಗಡಿ ಜಿಲ್ಲೆ ಚಾಮರಾಜನಗರದ ಚಿಂಚಳ್ಳಿಯ ರೈತ ಪಿ. ದಯಾನಂದ್‌ ಅವರು ತಮ್ಮ ಪುತ್ರಿ ವಿವಾಹವನ್ನುತಮ್ಮ ಹೊಲದಲ್ಲೇ ಏರ್ಪಡಿಸಿದ್ದಾರೆ.

ತಮ್ಮ ಹೊಲವನ್ನು ನಿಸರ್ಗದ ಮಡಿಲಿನಂತೆ ಸೃಷ್ಠಿ ಮಾಡಿದ್ದು, ಅಲ್ಲಿ ಏನುಂಟು ಏನಿಲ್ಲ ಎಂಬುವಂತೆ ಅಳಿವಿನಂಚಿನಲ್ಲಿರುವ ಸಸ್ಯಗಳನ್ನು ಎಲ್ಲೆಡೆಯಿಂದ ಸಂಗ್ರಹಿಸಿ ತಂದು, ಸಂರಕ್ಷಣೆ ಮಾಡುವ ಮೂಲಕ ಹೊಲದಲ್ಲೇ ಕಾಡನ್ನೇ ಬೆಳೆಸಿದ್ದಾರೆ. ಅಲ್ಲಿ ದುಂಬಿಗಳ ಜೈಂಕಾರ, ಚಿಟ್ಟೆ ಪಕ್ಷಿಗಳ ಕಲರವ ಕೇಳುವಂತಹ ವಾತವರಣ ನಿರ್ಮಾಣಮಾಡಿದ್ದು, ಅಲ್ಲೇ ತಮ್ಮ ದ್ವೀತಿಯ ಪುತ್ರಿ ರಶ್ಮಿ ದಯಾನಂದ್‌ ಅವರನ್ನು ಬೆಂಗಳೂರಿನ ಕುಬೇರ್‌ ಅವರಿಗೆ ಧಾರೆ ಎರೆದುಕೊಡಲಿದ್ದಾರೆ.

ಕೃಷಿ ಪ್ರವಾಸೋದ್ಯಮದಲ್ಲಿ ಅಸಕ್ತಿ ಹೊಂದಿರುವ ಪಿ. ದಯಾನಂದ್‌ ಅವರು ಹಿಂದೆ ಮದುವೆಗಳು ಹಳ್ಳಿಯ ಮನೆಗಳಲ್ಲಿ ನೆಂಟರಿಷ್ಟರ ಸಮ್ಮುಖದಲ್ಲಿ ನಡೆಸುತ್ತಿದ್ದವು. ಇದೀಗ ನಮ್ಮ ಮಗಳ ಮದುವೆ ನಾನು ಹತ್ತಾರು ವರ್ಷಗಳಿಂದ ಶ್ರಮಪಟ್ಟು ನೆಟ್ಟಿರುವ ಮರಗಿಡಗಳು, ಪಕ್ಷಿಗಳ ಕಲರವ, ದುಂಬಿಯ ಜೈಕಾರದೊಂದಿಗೆ ಇಲ್ಲೇ ಸಿಗುವ ಸ್ಧಳೀಯ ಸಸ್ಯಗಳ ಅಲಂಕಾರರೊಂದಿಗೆ ನಡೆಯಲಿ.

ಮದುವೆಗೆ ಬರುವ ಬಂಧುಬಾಂಧವರಿಗೆ ಕೃಷಿ ಪ್ರವಾಸೋದ್ಯಮವೂ ಆಗಲಿ, ತೋಟಗಾರಿಕೆ, ಕೃಷಿ, ಹೈನುಗಾರಿಕೆ, ಮೀನುಗಾರಿಕೆ, ಜೇನು ಸಾಕಾಣೆ, ರೇಷ್ಮೆ, ಹಾಗೂ ಅರಣ್ಯ ಕೃಷಿಯನ್ನು ನೋಡಿ ಸಂಭ್ರಮಿಸುವ ಮೂಲಕ ಮದುವೆಯಲ್ಲಿ ಭಾಗಿಯಾಗಲಿ ಎಂಬ ಉದ್ದೇಶದಿಂದ ಹೊಲದಲ್ಲೇ ಮಾವು ಹಲಸಿನ ಮರದಡಿ ವಿವಾಹ ನಡೆಸುತ್ತಿದ್ದೇವೆ. ಇದೇ ನಮ್ಮ ಮಗಳು ಮತ್ತು ಅಳಿಯನ ಆಶಯವಾಗಿತ್ತು ಎನ್ನುತ್ತಾರೆ ದಯಾನಂದ್‌.

ಮದುವೆಗೆ ಬರುವವರು ಸಾವಿರಾರು ಸಸ್ಯ ವರ್ಗಗಳ ಜೊತೆಗೆ ಹತ್ತಾರು ಬೆಳೆ ನೋಡಬಹುದಾಗಿದ್ದು, ನೂರಾರು ಬಗೆ ಬಗೆಯ ಹಣ್ಣುಗಳನ್ನು ಸವಿಯಬಹುದಾಗಿದೆ. ಬರಗೂರ್, ಹಳ್ಳಿಕಾರ್, ತಳಿ ಹಸುಗಳು,ಕುರಿ ಕೋಳಿ, ಮೇಕೆ ಹಾಗೂ ಕತ್ತೆಗಳನ್ನು ಸಾಕುತ್ತಿರುವುದನ್ನು ನೋಡಬಹುದು.

ಎಣ್ಣೆ ಘಟಕ, ಸುಗಂಧ ತಯಾರಿಕಾ ಘಟಕವೂ ಇಲ್ಲಿದ್ದು, ತೋಟಕ್ಕೆ ಭೇಟಿ ನೀಡುವವರಿಗೆ ಕೃಷಿ ತಿಳುವಟಿಕೆ ಮೂಡಿಸಬೇಕು ಎಂಬ ಉದ್ದೇಶದಿಂದ ವಿವಿಧ ಬಗೆಯ ಪರಿಕರಗಳ ಜೊತೆಗೆ ಎತ್ತಿನ ಗಾಡಿ, ಕುದುರೆಗಾಡಿ, ವಿವಿಧ ಮಾದರಿಯ ಸ್ಕೂಟರ್‌ ಮತ್ತು ಕಾರುಗಳನ್ನು ಪ್ರದರ್ಶನಕ್ಕಿಟ್ಟಿದ್ದಾರೆ.

ಹಳ್ಳಿಗಾಡಿನವರೇ ಸಾಲ ಸೋಲವಾದ್ರು ಸರಿ ಎಂದು ದೊಡ್ಡ ದೊಡ್ಡ ನಗರಿ, ವಿದೇಶದಲ್ಲಿ ಮದುವೆ ಮಾಡಿಸುವ ಈ ಕಾಲದಲ್ಲಿ ಲಂಡನ್‌ನಲ್ಲಿ ವ್ಯಾಸಂಗ ಮುಗಿಸಿರುವ ಪುತ್ರಿ ವಿವಾಹವನ್ನು ಹನೂರು ತಾಲೂಕಿನ ಚಿಂಚಹಳ್ಳಿ ಗ್ರಾಮದ ರೈತ ಪಿ. ದಯಾನಂದ್‌ ಅವರು ಶ್ರಮಪಟ್ಟು ಬೆಳೆಸಿರುವ ಸಾವಿರಾರು ಸಸ್ಯೆ ಕಾಶಿಯ ನಡುವೆ ಸಿಗುವ ಬಗೆ ಬಗೆಯ ಸೊಪ್ಪುಗಳಿಂದ ಅಲಂಕಾರಮಾವು, ಹಲಸಿನ ಮರದಡಿ ಚಪ್ಪರ ನಿರ್ಮಿಸಿ ಪುತ್ರಿ ವಿವಾಹಶಾಸ್ತ್ರಕ್ಕೆ ವೇದಿಕೆ ಕಲ್ಪಿಸಿಕೊಟ್ಟಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

10 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

11 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago