ಚಾಮರಾಜನಗರ

ಧರ್ಮಸ್ಥಳ ಸಂಘಗಳ ಕಾರ್ಯ ಶ್ಲಾಘನೀಯ: ಶಾಸಕ ಮಂಜುನಾಥ್

ಹನೂರು: ಸರ್ಕಾರ ಮಾಡಬೇಕಾಗಿರುವ ಬಹುತೇಕ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಮಾಡುತ್ತಿರುವುದು ಸಂತಸದ ವಿಚಾರ ಎಂದು ಶಾಸಕ ಎಂಆರ್ ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು

ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಹನೂರು ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆ ಚಾಮರಾಜನಗರ ಜಿಲ್ಲೆ, ಗ್ರಾಮ ಪಂಚಾಯಿತಿ, ಸಾಲೂರು ಮಠ, ಶ್ರೀ ಮಲೆಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಗಾಂಧಿ ಸ್ಮೃತಿ ಜನಜಾಗೃತಿ ಜಾಥಾ ಮತ್ತು ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಂಡರು ಜಾರಿಗೆ ತರಲು ಕಷ್ಟ ಪಡುವಂತಹ ಸನ್ನಿವೇಶಗಳು ಎದುರಾಗುತ್ತದೆ ಆದರೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ವತಿಯಿಂದ 28 ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ ಇದಲ್ಲದೆ ಕಷ್ಟದಲ್ಲಿರುವವರಿಗೆ ವಾಸ ಯೋಜನೆ ಯಡಿ ಮನೆ ನಿರ್ಮಾಣ ಮಾಡಿಕೊಡುತ್ತಿದ್ದಾರೆ . ಹಾಲು ಉತ್ಪಾದಕರ ಸಹಕಾರ ಸಂಘ ಮನೆ ನಿರ್ಮಾಣ ಕೆರೆಗಳ ಅಭಿವೃದ್ಧಿ, ದೇವಸ್ಥಾನದ ಅಭಿವೃದ್ಧಿಗೂ ಸಂಘದ ವತಿಯಿಂದ ಆರ್ಥಿಕವಾಗಿ ಸಹಾಯ ಮಾಡಲಾಗುತ್ತಿರುವುದು ಸಂತಸದ ವಿಚಾರ ಎಂದರು.

ಸ್ವಾಸ್ಥ್ಯ ಸಮಾಜಕ್ಕೆ ಮದ್ಯ ಮಾರಾಟ ಕಂಟಕವಾಗಿರುವುದರಿಂದ ಸರ್ಕಾರ ಅಬಕಾರಿ ಇಲಾಖೆಯಲ್ಲಿ ಕೆಲವು ಪರ್ಯಾಯ ಮಾರ್ಪಡುಗಳನ್ನು ತರಬೇಕಾಗಿದೆ, ಪ್ರಸ್ತುತ ಸರ್ಕಾರಕ್ಕೆ ಅಬಕಾರಿ ಇಲಾಖೆಯಿಂದ 35 ಸಾವಿರ ಕೋಟಿ ಆದಾಯ ತರುತ್ತಿದೆ ಎಂಬ ಮಾಹಿತಿ ಇದೆ. ಆದಾಯ ನೋಡುವುದರ ಜೊತೆಗೆ ಸಮಾಜದ ಒಳಿತನ್ನು ಸಹ ಪರಿಗಣಿಸಬೇಕು. ಎಷ್ಟೋ ಕುಟುಂಬಗಳು ಈ ಮದ್ಯ ವ್ಯಸನದಿಂದ ಸಂಕಷ್ಟಕ್ಕೆ ತುತ್ತಾಗಿವೆ. ಇಂತಹ ಪರಿಸ್ಥಿತಿ ಮತ್ತು ವಾತಾವರಣವನ್ನು ಮನಗಂಡು ವ್ಯಕ್ತಿಯ ಬದುಕಲ್ಲಿ ಹಾಗೂ ಸಮಾಜದಲ್ಲಿ ಬದಲಾವಣೆ ತರಲು ವಿವಿಧ ಸಂಘ ಸಂಸ್ಥೆಗಳು ಮುಂದಾಗಿರುವುದು ಶ್ಲಾಘನೀಯ ವಿಚಾರ. ಈ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ವೀರೇಂದ್ರ ಹೆಗಡೆಯವರ ಪರಿಕಲ್ಪನೆ ಮಾದರಿಯಾದದ್ದು. ನವಜೀವನ ಸದಸ್ಯರು ಮದ್ಯ ತ್ಯಜಿಸುವುದರ ಜೊತೆಗೆ ಇನ್ನಿತರರನ್ನು ಮದ್ಯ ಮುಕ್ತರನ್ನಾಗಿ ಮಾಡಿ ಎಂದು ಸಲಹೆ ನೀಡಿದರು.

ಮಾಜಿ ಶಾಸಕಿ ಪರಿಮಳ ನಾಗಪ್ಪ ಮಾತನಾಡಿ ತಮ್ಮ ಅಮೂಲ್ಯ ಕುಟುಂಬ ಚೆನ್ನಾಗಿ ಇರಬೇಕಾದರೆ ಮದ್ಯ ವ್ಯಸನ ಇನ್ನಿತರೆ ದುಶ್ಚಟಗಳಿಂದ ದೂರವಿರಿ. ಸರ್ಕಾರ ಮಾಡುವ ಕಾರ್ಯಕ್ರಮಗಳನ್ನು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಮಾಡುತ್ತಿರುವುದು ಮೆಚ್ಚುಗೆ ವಿಷಯ. ಇದೊಂದು ಒಳ್ಳೆಯ ಕಾರ್ಯಕ್ರಮ ಎಂದು ಬಣ್ಣಿಸಿದರು.

ಗುಂಡೇಗಾಲ ಮಠದ ಮಲ್ಲಿಕಾರ್ಜುನ ಸ್ವಾಮಿಯವರು ಮಾತನಾಡಿ, ಮನಸ್ಸು ಬದಲಾಗಲು ಒಂದು ಕ್ಷಣ ಸಾಕು. ಮದ್ಯ ವ್ಯಸನಿಗಳಿಗೆ ಅಂತಹ ಕಾಲ ಬರಲಿ. ಮದ್ಯ ವ್ಯಸನಿಗಳು ಬಾಳನ್ನು ಹಾಳು ಮಾಡಿಕೊಳ್ಳಬೇಡಿ. ನಾವು ಯಾರು ಎಂಬುದನ್ನು ಮೊದಲು ಅರಿಯಿರಿ. ಮಹಿಳೆಯರು ಶ್ರೀ ಧರ್ಮಸ್ಥಳ ಸಂಘದಲ್ಲಿ ಸಿಗುವ ಸಾಲವನ್ನು ಸರಿಯಾದ ರೀತಿ ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಮಲೆಮಹದೇಶ್ವರ ಬೆಟ್ಟದ ಪ್ರಮುಖ ರಸ್ತೆಗಳಲ್ಲಿ ಸಂಘ ಸಂಸ್ಥೆಗಳು ಜಾಥಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಮದ್ಯಪಾನದಿಂದ ಮುಕ್ತರಾದ ನವಜೀವನ ಸಮಿತಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮ.ಮ.ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಚಾಮುಲ್ ನಿರ್ದೇಶಕ ಮಹಾದೇವಪ್ರಸಾದ್, ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ರಾಜಶೇಖರ ಆರಾಧ್ಯ, ಅಧ್ಯಕ್ಷ ಎಂ.ಎಸ್.ರವಿಶಂಕರ್, ಉಪಾಧ್ಯಕ್ಷ ಪ್ರಸಾದ್ ಊರ್ದಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ಪ್ರಾದೇಶಿಕ ಯೋಜನಾಧಿಕಾರಿ ಮಾಧವ, ಜಿಲ್ಲಾ ನಿರ್ದೇಶಕಿ ಲತಾ ಬಂಗೇರಾ, ಚಾ.ನ.ತಾ.ಯೋಜನಾಧಿಕಾರಿ ಹರೀಶ್ ಕುಮಾರ್, ಹನೂರು ತಾಲ್ಲೂಕು ಯೋಜನಾಧಿಕಾರಿ ಪ್ರವೀಣ್, ಮುಖಂಡರಾದ ವಿಜಯ್ ಕುಮಾರ್, ಕೌದಳ್ಳಿ ಶಿವರಾಮು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಂಘದ ಮಹಿಳಾ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ದರೋಡೆ ಮಾಡಲು ಬಂದವನಿಂದ ವ್ಯಕ್ತಿಯ ಬರ್ಬರ ಹತ್ಯೆ

ಮಂಡ್ಯ: ಪಾರ್ಸೆಲ್‌ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್‌…

8 hours ago

ನಿವೃತ್ತ ಸಾರಿಗೆ ನೌಕರರಿಗೆ ಸಿಹಿಸುದ್ದಿ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…

8 hours ago

ಸಾಹಿತ್ಯ ಸಮ್ಮೇಳನ ವೇದಿಕೆಯಲ್ಲಿ ಸಿಎಂ ರಾಜಕೀಯ ಭಾಷಣ ಮಾಡಿದ್ದಾರೆ: ಬಿಜೆಪಿ ಕಿಡಿ

ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…

9 hours ago

ನನ್ನ ವಿರುದ್ಧದ ಆರೋಪಗಳು ಅವಮಾನಕರ: ನಟ ಅಲ್ಲು ಅರ್ಜುನ್‌ ಬೇಸರ

ಹೈದರಾಬಾದ್:‌ ಡಿಸೆಂಬರ್.‌4ರಂದು ಸಂಧ್ಯಾ ಥಿಯೇಟರ್‌ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್‌ ಬೇಸರ…

9 hours ago

ನೆಲಮಂಗಲದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ 6 ಮಂದಿ ದುರ್ಮರಣ

ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್‌ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…

10 hours ago

ವಕ್ಫ್ ಭೂ ಕಬಳಿಕೆ ವಿರುದ್ಧದ ಹೋರಾಟಕ್ಕೆ ಜಯ ಸಿಕ್ಕಿದೆ: ಪ್ರತಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…

10 hours ago