ಚಾಮರಾಜನಗರ

ಧರ್ಮಸ್ಥಳ ಸಂಘಗಳ ಕಾರ್ಯ ಶ್ಲಾಘನೀಯ: ಶಾಸಕ ಮಂಜುನಾಥ್

ಹನೂರು: ಸರ್ಕಾರ ಮಾಡಬೇಕಾಗಿರುವ ಬಹುತೇಕ ಕಾರ್ಯಕ್ರಮಗಳನ್ನು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗಡೆ ರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಮಾಡುತ್ತಿರುವುದು ಸಂತಸದ ವಿಚಾರ ಎಂದು ಶಾಸಕ ಎಂಆರ್ ಮಂಜುನಾಥ್ ಮೆಚ್ಚುಗೆ ವ್ಯಕ್ತಪಡಿಸಿದರು

ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಹನೂರು ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಧರ್ಮಸ್ಥಳ ಮತ್ತು ಜಿಲ್ಲಾ ಜನಜಾಗೃತಿ ವೇದಿಕೆ ಚಾಮರಾಜನಗರ ಜಿಲ್ಲೆ, ಗ್ರಾಮ ಪಂಚಾಯಿತಿ, ಸಾಲೂರು ಮಠ, ಶ್ರೀ ಮಲೆಮಹದೇಶ್ವರ ಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಇವರ ಸಹಯೋಗದೊಂದಿಗೆ ಏರ್ಪಡಿಸಲಾಗಿದ್ದ ಗಾಂಧಿ ಸ್ಮೃತಿ ಜನಜಾಗೃತಿ ಜಾಥಾ ಮತ್ತು ನವಜೀವನ ಸಮಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿಕೊಂಡರು ಜಾರಿಗೆ ತರಲು ಕಷ್ಟ ಪಡುವಂತಹ ಸನ್ನಿವೇಶಗಳು ಎದುರಾಗುತ್ತದೆ ಆದರೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘದ ವತಿಯಿಂದ 28 ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದ್ದಾರೆ ಇದಲ್ಲದೆ ಕಷ್ಟದಲ್ಲಿರುವವರಿಗೆ ವಾಸ ಯೋಜನೆ ಯಡಿ ಮನೆ ನಿರ್ಮಾಣ ಮಾಡಿಕೊಡುತ್ತಿದ್ದಾರೆ . ಹಾಲು ಉತ್ಪಾದಕರ ಸಹಕಾರ ಸಂಘ ಮನೆ ನಿರ್ಮಾಣ ಕೆರೆಗಳ ಅಭಿವೃದ್ಧಿ, ದೇವಸ್ಥಾನದ ಅಭಿವೃದ್ಧಿಗೂ ಸಂಘದ ವತಿಯಿಂದ ಆರ್ಥಿಕವಾಗಿ ಸಹಾಯ ಮಾಡಲಾಗುತ್ತಿರುವುದು ಸಂತಸದ ವಿಚಾರ ಎಂದರು.

ಸ್ವಾಸ್ಥ್ಯ ಸಮಾಜಕ್ಕೆ ಮದ್ಯ ಮಾರಾಟ ಕಂಟಕವಾಗಿರುವುದರಿಂದ ಸರ್ಕಾರ ಅಬಕಾರಿ ಇಲಾಖೆಯಲ್ಲಿ ಕೆಲವು ಪರ್ಯಾಯ ಮಾರ್ಪಡುಗಳನ್ನು ತರಬೇಕಾಗಿದೆ, ಪ್ರಸ್ತುತ ಸರ್ಕಾರಕ್ಕೆ ಅಬಕಾರಿ ಇಲಾಖೆಯಿಂದ 35 ಸಾವಿರ ಕೋಟಿ ಆದಾಯ ತರುತ್ತಿದೆ ಎಂಬ ಮಾಹಿತಿ ಇದೆ. ಆದಾಯ ನೋಡುವುದರ ಜೊತೆಗೆ ಸಮಾಜದ ಒಳಿತನ್ನು ಸಹ ಪರಿಗಣಿಸಬೇಕು. ಎಷ್ಟೋ ಕುಟುಂಬಗಳು ಈ ಮದ್ಯ ವ್ಯಸನದಿಂದ ಸಂಕಷ್ಟಕ್ಕೆ ತುತ್ತಾಗಿವೆ. ಇಂತಹ ಪರಿಸ್ಥಿತಿ ಮತ್ತು ವಾತಾವರಣವನ್ನು ಮನಗಂಡು ವ್ಯಕ್ತಿಯ ಬದುಕಲ್ಲಿ ಹಾಗೂ ಸಮಾಜದಲ್ಲಿ ಬದಲಾವಣೆ ತರಲು ವಿವಿಧ ಸಂಘ ಸಂಸ್ಥೆಗಳು ಮುಂದಾಗಿರುವುದು ಶ್ಲಾಘನೀಯ ವಿಚಾರ. ಈ ನಿಟ್ಟಿನಲ್ಲಿ ಶ್ರೀ ಧರ್ಮಸ್ಥಳ ವೀರೇಂದ್ರ ಹೆಗಡೆಯವರ ಪರಿಕಲ್ಪನೆ ಮಾದರಿಯಾದದ್ದು. ನವಜೀವನ ಸದಸ್ಯರು ಮದ್ಯ ತ್ಯಜಿಸುವುದರ ಜೊತೆಗೆ ಇನ್ನಿತರರನ್ನು ಮದ್ಯ ಮುಕ್ತರನ್ನಾಗಿ ಮಾಡಿ ಎಂದು ಸಲಹೆ ನೀಡಿದರು.

ಮಾಜಿ ಶಾಸಕಿ ಪರಿಮಳ ನಾಗಪ್ಪ ಮಾತನಾಡಿ ತಮ್ಮ ಅಮೂಲ್ಯ ಕುಟುಂಬ ಚೆನ್ನಾಗಿ ಇರಬೇಕಾದರೆ ಮದ್ಯ ವ್ಯಸನ ಇನ್ನಿತರೆ ದುಶ್ಚಟಗಳಿಂದ ದೂರವಿರಿ. ಸರ್ಕಾರ ಮಾಡುವ ಕಾರ್ಯಕ್ರಮಗಳನ್ನು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘವು ಮಾಡುತ್ತಿರುವುದು ಮೆಚ್ಚುಗೆ ವಿಷಯ. ಇದೊಂದು ಒಳ್ಳೆಯ ಕಾರ್ಯಕ್ರಮ ಎಂದು ಬಣ್ಣಿಸಿದರು.

ಗುಂಡೇಗಾಲ ಮಠದ ಮಲ್ಲಿಕಾರ್ಜುನ ಸ್ವಾಮಿಯವರು ಮಾತನಾಡಿ, ಮನಸ್ಸು ಬದಲಾಗಲು ಒಂದು ಕ್ಷಣ ಸಾಕು. ಮದ್ಯ ವ್ಯಸನಿಗಳಿಗೆ ಅಂತಹ ಕಾಲ ಬರಲಿ. ಮದ್ಯ ವ್ಯಸನಿಗಳು ಬಾಳನ್ನು ಹಾಳು ಮಾಡಿಕೊಳ್ಳಬೇಡಿ. ನಾವು ಯಾರು ಎಂಬುದನ್ನು ಮೊದಲು ಅರಿಯಿರಿ. ಮಹಿಳೆಯರು ಶ್ರೀ ಧರ್ಮಸ್ಥಳ ಸಂಘದಲ್ಲಿ ಸಿಗುವ ಸಾಲವನ್ನು ಸರಿಯಾದ ರೀತಿ ಬಳಕೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಮಲೆಮಹದೇಶ್ವರ ಬೆಟ್ಟದ ಪ್ರಮುಖ ರಸ್ತೆಗಳಲ್ಲಿ ಸಂಘ ಸಂಸ್ಥೆಗಳು ಜಾಥಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ವೇದಿಕೆ ಕಾರ್ಯಕ್ರಮದಲ್ಲಿ ಮದ್ಯಪಾನದಿಂದ ಮುಕ್ತರಾದ ನವಜೀವನ ಸಮಿತಿ ಸದಸ್ಯರನ್ನು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮ.ಮ.ಬೆಟ್ಟ ಅಭಿವೃದ್ದಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ್, ಚಾಮುಲ್ ನಿರ್ದೇಶಕ ಮಹಾದೇವಪ್ರಸಾದ್, ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷ ರಾಜಶೇಖರ ಆರಾಧ್ಯ, ಅಧ್ಯಕ್ಷ ಎಂ.ಎಸ್.ರವಿಶಂಕರ್, ಉಪಾಧ್ಯಕ್ಷ ಪ್ರಸಾದ್ ಊರ್ದಳ್ಳಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ನ ಪ್ರಾದೇಶಿಕ ಯೋಜನಾಧಿಕಾರಿ ಮಾಧವ, ಜಿಲ್ಲಾ ನಿರ್ದೇಶಕಿ ಲತಾ ಬಂಗೇರಾ, ಚಾ.ನ.ತಾ.ಯೋಜನಾಧಿಕಾರಿ ಹರೀಶ್ ಕುಮಾರ್, ಹನೂರು ತಾಲ್ಲೂಕು ಯೋಜನಾಧಿಕಾರಿ ಪ್ರವೀಣ್, ಮುಖಂಡರಾದ ವಿಜಯ್ ಕುಮಾರ್, ಕೌದಳ್ಳಿ ಶಿವರಾಮು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಂಘದ ಮಹಿಳಾ ಸದಸ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಪಬ್‌ನಲ್ಲಿ ಅಗ್ನಿ ದುರಂತ ; ಇಬ್ಬರು ಸಜೀವ ದಹನ , 7 ಮಂದಿ ಗಂಭೀರ

ಮೈಸೂರು : ಪಬ್​ನಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾಗಿರುವ ಘಟನೆ ನಗರದ ದಟ್ಟಗಳ್ಳಿಯಲ್ಲಿ ನಡೆದಿದೆ. ನಗರದ ರಿಂಗ್​…

29 mins ago

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

3 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

5 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

5 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

6 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

10 hours ago