ಚಾಮರಾಜನಗರ

ಜಾನಪದ ಕಲೆ ಉಳಿಸುವ ಕೆಲಸ ನಿರಂತರವಾಗಿ ಸಾಗಬೇಕು: ಗುರುಲಿಂಗಯ್ಯ

ಹನೂರು: ನಮ್ಮ ಭಾಗದ ಮೂಲ ಜಾನಪದ ಕಲೆಗಳಾದ ರಾಗಿಕಲ್ಲು ಬೀಸುಪದ,ತಂಬೂರಿ ಪದ ಇನ್ನಿತರೆ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ನಿರಂತರವಾಗಿ ಸಾಗಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ ಅಭಿಪ್ರಾಯಪಟ್ಟರು .

ತಾಲೂಕಿನ ಹನೂರು ಶೈಕ್ಷಣಿಕ ವಲಯದ ಬಂಡಹಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಚಾಮರಾಜನಗರ ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿಗಳಾದ ಮಹದೇಶ್ವರರು,ಮಂಟೇಸ್ವಾಮಿ, ಸಿದ್ದಪ್ಪಾಜಿ ರವರ ಕುರಿತಾದ ಜಾನಪದ ಕಾವ್ಯಗಳ ಕುರಿತು ಇಂದಿನ ಮಕ್ಕಳಿಗೆ ತಿಳಿಸಿಕೊಡುವ ಅವಶ್ಯಕತೆ ಇದ್ದು, ಮಕ್ಕಳು ಕಲಿತು ಮುಂದಿನ ಪೀಳಿಗೆಗೆ ಇಂತಹ ಅತ್ಯುತ್ತಮ ಸಂಸ್ಕೃತಿಯನ್ನು ನೀಡಬೇಕು ಎಂದರು.

ಮಕ್ಕಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ತರಲು ಶಿಕ್ಷಕರು ಶ್ರಮವಹಿಸಿದರೆ, ಪ್ರತಿಭೆಗಳನ್ನು ಸಮಾಜಕ್ಕೆ ನೀಡಬಹುದು, ವಿದ್ಯಾರ್ಥಿಗಳು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮಲ್ಲಿರುವ ಪ್ರತಿಭೆಯನ್ನು ತೋರ್ಪಡಿಸಬೇಕು ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ಪೋಷಕರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕ್ಲಸ್ಟರ್ ನ ವಿವಿಧ ಶಾಲೆಯ ಮಕ್ಕಳಿಗೆ ಪ್ರಶಸ್ತಿ ಪತ್ರ ನೆನಪಿನ ಕಾಣಿಕೆ ನೀಡುವ ಮೂಲಕ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಗುರುಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣೇಗೌಡ, ಬಡ್ತಿ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶಿವಮಲ್ಲು , ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರಾದ ಮುನಿಯನಾಯಕ,ಸಿ. ಆರ್. ಪಿ ದೊಡ್ಡಸಿದ್ದಶೆಟ್ಟಿ, ಜೆ ಎಸ್ ಎಸ್ ಶಾಲೆಯ ಮುಖ್ಯಶಿಕ್ಷಕರು,ವಿವಿಧ ಶಾಲೆಯ ಮುಖ್ಯ ಶಿಕ್ಷಕರು, ತೀರ್ಪುಗಾರರು ಮಕ್ಕಳು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

2 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

2 hours ago

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

2 hours ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

3 hours ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

4 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

4 hours ago