ಚಾಮರಾಜನಗರ

ಚಾಮರಾಜನಗರದಲ್ಲಿ ಮನೆಯ ಬೀಗ ಮುರಿದು ಚಿನ್ನಾಭರಣ ಕಳ್ಳತನ

ಚಾಮರಾಜನಗರ : ಮನೆ ಬೀಗ ಮುರಿದು ಬರೋಬ್ಬರಿ ೧೪ ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣವನ್ನ ಖದೀಮರು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ.

ಬಡಾವಣೆಯ ರಾಘವೇಂದ್ರ ಎಂಬುವವರ ಮನೆ ಇದಾಗಿದ್ದು, ಎಲ್ಲರೂ ಮಂತ್ರಾಲಯದ ರಾಯರ ದರ್ಶನಕ್ಕೆ ಎಂದು ಹೋಗಿದ್ದರು. ಮಂತ್ರಾಲಯದಿಂದ ಕುಟುಂಬಸ್ಥರು ಬರುವಷ್ಟರಲ್ಲಿ ಮನೆಯಲ್ಲಿದ್ದ ಚಿನ್ನದ ಜೊತೆಗೆ ೨೦ ಸಾವಿರ ರೂಪಾಯಿ  ನಗದು ದೋಚಿದ್ದಾರೆ. ಇನ್ನು ಈ ಸಂಬಂಧ ಚಾಮರಾಜನಗರ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಯಲ್ಲಿದ್ದ ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಸಂಘರ್ಷ ಶಮನಕ್ಕೆ 15 ಅಂಶ ಮುಂದಿಟ್ಟ ಟ್ರಂಪ್‌ ; ಸಂಧಾನ ಅಣಕಿಸಿದ ಇರಾನ್‌

ವಾಷಿಂಗ್ಟನ್‌ : ಪಶ್ಚಿಮ ಏಪ್ಯಾ ಸಂಘರ್ಷ ಶಮನಕ್ಕೆ ನಡೆಯುತ್ತಿರುವ ಪ್ರಯತ್ನಗಳ ಮಧ್ಯೆ, ಟ್ರಂಪ್ ಆಡಳಿತ 15 ಅಂಶಗಳ ಪ್ರಸ್ತಾವನೆಯನ್ನು ಇರಾನ್…

12 mins ago

ಹನೂರು | ಬಾವಿಗೆ ಬಿದ್ದ ಶ್ವಾನ, ಅಗ್ನಿಶಾಮಕ ಠಾಣಾ ಸಿಬ್ಬಂದಿಗಳಿಂದ ರಕ್ಷಣೆ

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…

1 hour ago

ಎಲ್‌ಪಿಜಿ ಕೊರತೆ ಪರಿಸ್ಥಿತಿ ; ಹಾಲಿನ ವಹಿವಾಟು ಯಥಾಸ್ಥಿತಿ

ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…

1 hour ago

ಓದುಗರ ಪತ್ರ | ಶಾಸನಸಭೆಗಳಲ್ಲಿ ಹೊಸ ಯೋಜನೆಗಳ ಚರ್ಚೆಯಾಗಲಿ

ಕರ್ನಾಟಕ ವಿಧಾನಸಭೆ ಹಾಗೂ ಸಂಸತ್‌ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…

2 hours ago

ಓದುಗರ ಪತ್ರ | ಒಳ ಮೀಸಲಾತಿ ಸಮಾನವಾಗಿ ಹಂಚಿಕೆಯಾಗಲಿ

ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…

2 hours ago

ಓದುಗರ ಪತ್ರ | ಮೇಕ್ ಇನ್ ಇಂಡಿಯಾಗೆ ಕಾಲ ಪಕ್ವ

ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…

2 hours ago