ಚಾಮರಾಜನಗರ : ಜಿಲ್ಲೆಯ ವಿವಿಧೆಡೆ ಮನೆಗಳ್ಳತನ, ಬೈಕ್ ಗಳ ಕಳವು ಮಾಡಿರುವುದಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಅವಧಿಯಲ್ಲಿ ೧೪ ಆರೋಪಿಗಳನ್ನು ಬಂಧಿಸಿ ಅವರಿಂದ ಸುಮಾರು ೨೮೫ ಗ್ರಾಂ ಚಿನ್ನಾಭರಣ, ೪೫ ಗ್ರಾಂ ಬೆಳ್ಳಿ, ೨ ಓಮ್ನಿ ವಾಹನ , ೧೦ ಬೈಕ್‌ಗಳು ಹಾಗೂ ೫೫ ಸಾವಿರ ರೂ. ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದ ಬಂಗಾರ ಸ್ವಾಮಿ, ವಿವೇಕ್, ಅಭಿ, ಕಾಗಲವಾಡಿ ಮುಬಾರಕ್, ಕೆಂಗಾಕಿ ಬಸವರಾಜು, ಅಮಚವಾಡಿ ಸಿದ್ದರಾಜು, ಯಳಂದೂರು ತಾಲ್ಲೂಕಿನ ಬೀಚಹಳ್ಳಿ ಪ್ರವೀಣ್ ಕುಮಾರ್, ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲದ ನಟೇಶ್, ಬೆಂಗಳೂರಿನ ಚಂದ್ರಪ್ಪ, ಸಂತೋಷ್ , ಮುಬಾರಕ್ ಹಾಗೂ ಇಬ್ಬರು ಬಾಲ ಆರೋಪಿಗಳು ಒಳಗೊಂಡಂತೆ ೧೪ ಮಂದಿಯನ್ನು ದಸ್ತಗಿರಿ ಮಾಡಲಾಗಿದೆ.
ಇದನ್ನೂ ಓದಿ:-ಸಿಎಂ ಬದಲಾವಣೆ ಹೈಕಮಾಂಡ್‌ಗೆ ಬಿಟ್ಟದ್ದು : ಸಚಿವ ಚಲುವರಾಯಸ್ವಾಮಿ
ವಶಪಡಿಸಿಕೊಂಡಿರುವ ಈ ಎಲ್ಲದರ ಒಟ್ಟು ಮೌಲ್ಯ ೨೨,೨೩,೩೦೦ ರೂ. ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಅವರು ತಮ್ಮ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ಆರೋಪಿಗಳ ಪೈಕಿ ಜಿಲ್ಲೆಯವರೇ ಹೆಚ್ಚು ಇದ್ದಾರೆ. ಅದರಲ್ಲೂ ೧೯, ೨೦, ೨೨ರ ವಯೋಮಾನದವರೂ ಇದ್ದಾರೆ. ಬಂಽತರಲ್ಲಿ ಹಳೆಯ ಪ್ರಕರಣದಲ್ಲಿ ಭಾಗಿಯಾದವರು, ಇದೇ ಮೊದಲ ಬಾರಿಗೆ ಕಳ್ಳತನ ಮಾಡಿದವರೂ ಇದ್ದಾರೆ. ಬಾಲ ಆರೋಪಿಗಳನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿದೆ ಎಂದರು.
ಕೊಳ್ಳೇಗಾಲ ಗ್ರಾಮಾಂತರ ಠಾಣೆ, ಯಳಂದೂರು ಠಾಣೆಯಲ್ಲಿ ತಲಾ ೨, ರಾಮಾಪುರ, ಕುದೇರು, ಚಾಮರಾಜನಗರ ಪೂರ್ವ ಠಾಣೆಯಲ್ಲಿ ತಲಾ ೧, ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ೨, ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ೩ ಸೇರಿದಂತೆ ಒಟ್ಟು ೧೨ ಕಳವು ಪ್ರಕರಣಗಳಿಗೆ ಸಂಬಂಽಸಿದಂತೆ ಆರೋಪಿಗಳನ್ನು, ಕಳವು ಮಾಲನ್ನು ಜಿಲ್ಲಾ ಅಪರಾಧ ವಿಶೇಷ ದಳದವರು ಪತ್ತೆ ಹಚ್ಚಿದ್ದಾರೆ. ಕಾನೂನು ರೀತ್ಯಾ ಮುಂದಿನ ಕ್ರಮ ವಹಿಲಾಗಿದೆ ಎಂದು ಎಸ್ಪಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಡಿವೈಎಸ್ಪಿಗಳಾದ ಚಾಮರಾಜನಗರದ ಸ್ನೇಹರಾಜ್, ಕೊಳ್ಳೇಗಾಲದ ಧರ್ಮೇಂದ್ರ ಹಾಜರಿದ್ದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…