ಚಾಮರಾಜನಗರ: ರಾಜ್ಯದಲ್ಲಿ ಯಾವ ನವೆಂಬರ್ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಈ ಕುರಿತು ಚಾಮರಾಜನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಇರುವವರೆಗೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನವೆಂಬರ್ ಕ್ರಾಂತಿಯ ಬಗ್ಗೆ ಅನವಶ್ಯಕ ಚರ್ಚೆ ನಡೆಯುತ್ತಿದೆ. 5 ವರ್ಷ ಆದ ಮೇಲೆ ಚುನಾವಣೆ ನಡೆಯುತ್ತದೆ. ಆಗಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು ಸಚಿವ ಸಂಪುಟ ಪುನರ್ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ. ಹೈಕಮಾಂಡ್ ಈ ಕುರಿತು ಚರ್ಚಿಸಬೇಕು ಎಂದು ಹೇಳಿದರು.
ಇನ್ನು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಈ ಬಾರಿ ಮಳೆ ಜಾಸ್ತಿ ಆಗಿರುವ ಪರಿಣಾಮ ಪ್ರವಾಹದಿಂದ ಬೆಳೆಗಳು ನಾಶವಾಗಿವೆ. ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಜೊತೆಗೆ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ ನಡೆಸಿದ್ದೇನೆ ಎಂದರು.
ಇನ್ನು ಬೆಂಗಳೂರಿನಲ್ಲಿ 7 ಕೋಟಿ ದರೋಡೆಯಾಗಿರುವ ಪ್ರಕರಣ ಸಂಬಂಧ ಮಾತನಾಡಿದ ಅವರು, ಆರೋಪಿಗಳ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರದಲ್ಲಿ ಸಿಕ್ಕಿದೆ. ದರೋಡೆಕೋರರನ್ನು ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.
ಮಡಿಕೇರಿ: ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿರಾಜಪೇಟೆ ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಣಸೂರಿನ ರತ್ನಪುರಿ ನಿವಾಸಿ ಜಾಹಿರ್…
ನಂಜನಗೂಡು: ತಾಲ್ಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದಲ್ಲಿ ಆಯೋಜಿಸಿದ್ದ ನಾಟಕ ನೋಡಿ ಅಲ್ಲೇ ಪಕ್ಕದಲ್ಲಿ ಮಲಗಿ…
ಬೆಂಗಳೂರು: ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಡಿಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ವಿಡಿಯೋ ವೈರಲ್…
ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ನಂಜನಗೂಡು ಭಾಗದ ಪ್ರದೇಶಕ್ಕೆ ಚಿರತೆ ಪ್ರವೇಶಿಸಿ ಭೀತಿಯನ್ನುಂಟು ಮಾಡಿದೆ. ನಂಜನಗೂಡು ತಾಲ್ಲೂಕಿನ…
ಮೈಸೂರು: ಮಹಿಳಾ ಸಿಬ್ಬಂದಿ ಜೊತೆ ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ…
ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…