ಚಾಮರಾಜನಗರ

ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ರಾಜ್ಯದಲ್ಲಿ ಯಾವ ನವೆಂಬರ್‌ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಚಾಮರಾಜನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನಾಶೀರ್ವಾದ ಇರುವವರೆಗೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ. ನವೆಂಬರ್‌ ಕ್ರಾಂತಿಯ ಬಗ್ಗೆ ಅನವಶ್ಯಕ ಚರ್ಚೆ ನಡೆಯುತ್ತಿದೆ. 5 ವರ್ಷ ಆದ ಮೇಲೆ ಚುನಾವಣೆ ನಡೆಯುತ್ತದೆ. ಆಗಲೂ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಸಚಿವ ಸಂಪುಟ ಪುನರ್‌ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಸಂಪುಟ ಪುನಾರಚನೆ ಬಗ್ಗೆ ಯಾವುದೇ ತೀರ್ಮಾನ ಆಗಿಲ್ಲ.‌ ಹೈಕಮಾಂಡ್‌ ಈ ಕುರಿತು ಚರ್ಚಿಸಬೇಕು ಎಂದು ಹೇಳಿದರು.

ಇನ್ನು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಈ ಬಾರಿ ಮಳೆ ಜಾಸ್ತಿ ಆಗಿರುವ ಪರಿಣಾಮ ಪ್ರವಾಹದಿಂದ ಬೆಳೆಗಳು ನಾಶವಾಗಿವೆ. ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿ ಮಾಡಿದ್ದೇನೆ. ಜೊತೆಗೆ ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಚರ್ಚೆ ನಡೆಸಿದ್ದೇನೆ ಎಂದರು.

ಇನ್ನು ಬೆಂಗಳೂರಿನಲ್ಲಿ 7 ಕೋಟಿ ದರೋಡೆಯಾಗಿರುವ ಪ್ರಕರಣ ಸಂಬಂಧ ಮಾತನಾಡಿದ ಅವರು, ಆರೋಪಿಗಳ ಸುಳಿವು ಸಿಕ್ಕಿದೆ. ಕೃತ್ಯಕ್ಕೆ ಬಳಸಿದ್ದ ಕಾರು ಆಂಧ್ರದಲ್ಲಿ ಸಿಕ್ಕಿದೆ. ದರೋಡೆಕೋರರನ್ನು ಬಿಡುವ ಮಾತೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

6 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ನೆರಳಿನಂತಿದ್ದ ಕಸ್ತೂರ ಬಾ

ಡಾ.ಪ್ರಮೀಳಾದೇವಿ ಬಿ.ಕೆ ಗಾಂಧೀಜಿಯ ನೆರಳಿ ನಂತಿದೂ ಅವರ ಚಿಂತನೆಗಳ, ಪ್ರಯೋಗ ಗಳನ್ನು ತಿದ್ದಿ ತೀಡಿದ ಪತ್ನಿ ಕಸ್ತೂರ ಬಾ. ಬಾಲ್ಯ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗೊಂದಲಗೊಳಿಸುತಿದ್ದ ಹಲವು ಸಂದೇಹಗಳು

ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…

8 hours ago

ಯುಪಿಯಲ್ಲಿ ತಯಾರಾಗುತ್ತಿರುವ ಬ್ರಹ್ಮೋಸ್‌ ಕ್ಷಿಪಣಿಗಳು ಪಾಕ್‌ ನಿದ್ದೆಗೆಡಿಸಿವೆ: ಅಮಿತ್‌ ಶಾ

ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.…

1 day ago

ಪ್ರಜಾಪ್ರಭುತ್ವ ರಕ್ಷಿಸಲು ಗಾಂಧಿ ಜಯಂತಿಯಂದು ಪ್ರತಿಜ್ಞೆ ಮಾಡೋಣ: ಅಭಿಜಿತ್‌ ದೀಪ್ಕೆ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…

1 day ago