ಚಾಮರಾಜನಗರ: ಇಲ್ಲಿನ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಖದೀಮರು ಮನೆಯ ಬಾಗಿಲು ಮೀಟಿ ತಮ್ಮ ಕೈಚಳಕ ತೋರಿಸಿದ್ದಾರೆ.
ಮಂಜುಳಾ ಎಂಬುವವರು ಬಾಡಿಗೆಯಿದ್ದ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿದ್ದ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ.
ಮನೆಯವರು ಬೀಗ ಹಾಕಿ ಹೊರ ಹೋಗಿದ್ದ ಸಂದರ್ಭದಲ್ಲಿ ಕಳ್ಳತನ ನಡೆದಿದ್ದು, ಇಂದು ಮನೆಗೆ ವಾಪಸ್ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಡಿಷನಲ್ ಎಸ್ಪಿ ಶಶಿಧರ್ ಅವರು, ಬೆರಳಚ್ಚು ತಜ್ಞರ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.