ಚಾಮರಾಜನಗರ

ಚಾಮರಾಜನಗರ| ಮನೆಯ ಬಾಗಿಲು ಮುರಿದು ಚಿನ್ನಾಭರಣ ಹೊತ್ತೊಯ್ದ ಖದೀಮರು

ಚಾಮರಾಜನಗರ: ಇಲ್ಲಿನ ಹೌಸಿಂಗ್‌ ಬೋರ್ಡ್‌ ಕಾಲೋನಿಯಲ್ಲಿ ಖದೀಮರು ಮನೆಯ ಬಾಗಿಲು ಮೀಟಿ ತಮ್ಮ ಕೈಚಳಕ ತೋರಿಸಿದ್ದಾರೆ.

ಮಂಜುಳಾ ಎಂಬುವವರು ಬಾಡಿಗೆಯಿದ್ದ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯಲ್ಲಿದ್ದ 120 ಗ್ರಾಂ ಚಿನ್ನ, 210 ಗ್ರಾಂ ಬೆಳ್ಳಿ, ಹತ್ತು ಸಾವಿರ ರೂಪಾಯಿ ನಗದನ್ನು ದೋಚಿ ಪರಾರಿಯಾಗಿದ್ದಾರೆ.

ಮನೆಯವರು ಬೀಗ ಹಾಕಿ ಹೊರ ಹೋಗಿದ್ದ ಸಂದರ್ಭದಲ್ಲಿ ಕಳ್ಳತನ ನಡೆದಿದ್ದು, ಇಂದು ಮನೆಗೆ ವಾಪಸ್‌ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಡಿಷನಲ್‌ ಎಸ್ಪಿ ಶಶಿಧರ್‌ ಅವರು, ಬೆರಳಚ್ಚು ತಜ್ಞರ ಸಹಾಯದಿಂದ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚಾಮರಾಜನಗರ ಪಟ್ಟಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

1 second ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

9 mins ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

1 hour ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

1 hour ago

ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ; ಪಾರದರ್ಶನ ನೇಮಕಾತಿಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…

2 hours ago

ಶ್ರೀರಂಗಪಟ್ಟಣ | ಕರಗದ ವೇಳೆ ಕೊಂಡಕ್ಕೆ ಬಿದ್ದು ಇಬ್ಬರಿಗೆ ಗಾಯ

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…

2 hours ago