ಚಾಮರಾಜನಗರ : ಆನೆಗಳ ಸಂಖ್ಯೆಯಲ್ಲಿ ಬಂಡಿಪುರಕ್ಕೆ ಮೊದಲ ಸ್ಥಾನ ಬಂದ ಬೆನ್ನಲ್ಲೆ ಅರಣ್ಯ ಇಲಾಖೆ ಹೊಸ ಯೋಜನೆ ಜಾರಿಗೆ ಮುಂದಾಗಿದೆ. ಬಂಡಿಪುರಕ್ಕೆ ಮತ್ತಷ್ಟು ಪ್ರವಾಸಿಗರnfnuಯಲು ಗುಂಡ್ಲುಪೇಟೆ ತಾಲೂಕಿನಲ್ಲಿರುವ ರಾಮಪುರ ಆನೆ ಬಿಡಾರದಲ್ಲಿ ಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಗೆ ಚಿಂತನೆ ನಡೆಸಲಾಗುತ್ತಿದೆ. ಈ ಕುರಿತು ಬಂಡಿಪುರ ಸಿಎಫ್ ರಮೇಶ್ ಕುಮಾರ್ ಅವರು ಪಿಸಿಸಿಎಫ್ಗೆ ವರದಿ ಸಲ್ಲಿಸಿದ್ದಾರೆ.
ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಪ್ರವಾಸಿಗರ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗುವ ಸಾದ್ಯತೆ ಇದೆ. ಈಗಾಗಲೇ ಪ್ರತಿ ತಿಂಗಳು ಸಫಾರಿಯಿಂದಲೇ ಲಕ್ಷಾಂತರ ರೂಪಾಯಿ ಆದಾಯ ಬರುತ್ತಿರುವ ಹಿನ್ನೆಲೆ ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಸ್ಥಾಪನೆಯಾದರೆ ಬಂಡಿಪುರಕ್ಕೆ ಮತ್ತಷ್ಟು ಆದಾಯ ಹರಿದು ಬರಲಿರಲಿದೆ ಎಂಬುದು ಅಧಿಕಾರಿಗಳ ಪ್ಲಾನ್.
ಎಲಿಫೆಂಟ್ ಫೀಡಿಂಗ್ ಕ್ಯಾಂಪ್ ಜೊತೆಗೆ ಆನೆಗಳಿಗೆ ತರಬೇತಿ ನೀಡುವುದನ್ನ ಕಣ್ತುಂಬಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಬಂಡಿಪುರದಲ್ಲಿ ಸಫಾರಿ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರೇ ಮನಸೋತಿದ್ದರು. ಬರೋಬ್ಬರಿ 2 ಗಂಟೆಗಳ ಕಾಲ ಸಫಾರಿ ಮಾಡಿದ್ದರು. ಮೋದಿ ಸಫಾರಿ ಬಳಿಕ ರಾಜ್ಯದ ಇತರೆ ಜಿಲ್ಲೆಗಳಿಂದ ಅಲ್ಲದೆ, ಹೊರ ರಾಜ್ಯ, ವಿದೇಶದಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ.
ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ ಮಡಿಕೇರಿ: ಡಿ.೨೦…
ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…