Mysore
21
broken clouds

Social Media

ಸೋಮವಾರ, 23 ಫೆಬ್ರವರಿ 2026
Light
Dark

ಗುಂಡಾಲ್‌ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣ: ವ್ಯಕ್ತಿಯ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ .

ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (೩೫) ಬಂಧಿತ ವ್ಯಕ್ತಿಯಾಗಿದ್ದಾನೆ.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ಉಪ ವಿಭಾಗದ ಕೊಳ್ಳೇಗಾಲ ವನ್ಯಜೀವಿ ವಲಯದ ವ್ಯಾಪ್ತಿಯ ಗುಂಡಾಲ್ ಜಲಾಶಯದ ೧ನೇ ತೂಬಿನ ಹತ್ತಿರ ಗಂಡು ಹುಲಿ ಮೃತದೇಹ ಪತ್ತೆಯಾಗಿತ್ತು.

ಈ ಸಂಬಂಧ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡು ಕುಮಾರ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹುಲಿ ಸಾವಿನ ಪ್ರಕರಣದ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!