ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ .
ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (೩೫) ಬಂಧಿತ ವ್ಯಕ್ತಿಯಾಗಿದ್ದಾನೆ.
ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ಉಪ ವಿಭಾಗದ ಕೊಳ್ಳೇಗಾಲ ವನ್ಯಜೀವಿ ವಲಯದ ವ್ಯಾಪ್ತಿಯ ಗುಂಡಾಲ್ ಜಲಾಶಯದ ೧ನೇ ತೂಬಿನ ಹತ್ತಿರ ಗಂಡು ಹುಲಿ ಮೃತದೇಹ ಪತ್ತೆಯಾಗಿತ್ತು.
ಈ ಸಂಬಂಧ ಅರಣ್ಯಾಧಿಕಾರಿಗಳು ತನಿಖೆ ಕೈಗೊಂಡು ಕುಮಾರ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹುಲಿ ಸಾವಿನ ಪ್ರಕರಣದ ತನಿಖೆಯನ್ನು ಮುಂದುವರಿಸಲಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…
ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…