Mysore
19
few clouds

Social Media

ಬುಧವಾರ, 07 ಜನವರಿ 2026
Light
Dark

ಗುಂಡ್ಲುಪೇಟೆಯಲ್ಲಿ ಮುಂದುವರಿದ ವ್ಯಾಘ್ರನ ದಾಳಿ: ಅರಣ್ಯಾಧಿಕಾರಿಗಳ ವಿರುದ್ಧ ಅನ್ನದಾತರ ಆಕ್ರೋಶ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ಲುಪೇಟೆ ಬಫರ್‌ ಜೋನ್‌ ವಲಯ ವ್ಯಾಪ್ತಿಯಲ್ಲಿ ವ್ಯಾಘ್ರನ ದಾಳಿ ಮುಂದುವರಿದಿದ್ದು, ರೈತರು ಕಂಗಾಲಾಗಿದ್ದಾರೆ.

ನಿನ್ನೆ ತಾನೇ ವಡೆಯನಪುರ ಗ್ರಾಮದಲ್ಲಿ ಹುಲಿ ದಾಳಿಗೆ ಎರಡು ಹಸುಗಳು ಬಲಿಯಾಗಿದ್ದು, ಒಂದು ಹಸುವಿನ ಸ್ಥಿತಿ ಚಿಂತಾಜನಕವಾಗಿದೆ.

ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಹುಲಿ ದಾಳಿ ಹೆಚ್ಚಾಗಿದ್ದು, ಇದನ್ನು ತಡೆಯಲು ಅರಣ್ಯ ಇಲಾಖೆ ಸಿಬ್ಬಂದಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಅನ್ನದಾತರು ಆಕ್ರೋಶ ಹೊರಹಾಕಿದ್ದಾರೆ.

ಹಸುಗಳನ್ನು ಕಳೆದುಕೊಂಡು ರೈತರಿಗೆ ಅಪಾರ ನಷ್ಟವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಶೀಘ್ರದಲ್ಲೇ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಕಳೆದ ಒಂದು ವಾರದಿಂದ ಈ ಭಾಗದಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಜಮೀನುಗಳಿಗೆ ತೆರಳಲು ಜನರು ಹಿಂದೇಟು ಹಾಕುತ್ತಿದ್ದಾರೆ.

ಈ ಭಾಗದಲ್ಲಿ ಹುಲಿ ದಾಳಿಯನ್ನು ತಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸಿ, ಕಾಡಿನಿಂದ ನಾಡಿಗೆ ಹುಲಿಗಳು ಬರದ ಹಾಗೆ ನೋಡಿಕೊಳ್ಳಿ ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

 

 

Tags:
error: Content is protected !!