ಗುಂಡ್ಲುಪೇಟೆ : ತಾಲ್ಲೂಕಿನ ವಡ್ಡನಹೊಸಹಳ್ಳಿ ಗ್ರಾಮದ ಮಾರಶೆಟ್ಟಿ ಎಂಬವರ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಗಾಯ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.
ಕಳೆದ ಒಂದು ವಾರದಿಂದ ಹುಲಿಯ ಚಲನವಲನವಿದ್ದು, ಶನಿವಾರ ಹುಲಿ ದಾಳಿ ಮಾಡಿದೆ. ಮನುಷ್ಯರ ಮೇಲೆ ದಾಳಿ ಮಾಡುವುದಕ್ಕಿಂತ ಮೊದಲು ಅರಣ್ಯ ಇಲಾಖೆ ಹುಲಿಯನ್ನು ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಹುಲಿ, ಚಿರತೆ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಶೀಘ್ರದಲ್ಲಿ ಅರಣ್ಯ ಇಲಾಖೆ ಬೋನು ಇರಿಸಿ ಹುಲಿ ಸೆರೆ ಹಿಡಿಯಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಇದನ್ನೂ ಓದಿ :-ಅ.6 ರಂದು ಚಾಮುಂಡಿ ಬೆಟ್ಟದಲ್ಲಿ ರಥೋತ್ಸವ





