Mysore
23
overcast clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

ಚಾಮರಾಜನಗರ | ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ

ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ.

ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ ನಿವಾಸಿ ರವಿ ಎಂಬುವವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಹುಲಿ ಅಠಾತ್‌ ದಾಳಿ ನಡೆಸಿದೆ.

ಹುಲಿ ದಾಳಿಯಿಂದ ರವಿ ಅವರ ತಲೆ, ಕೈಗಳಿಗೆ ಗಂಭೀರ ಗಾಯಗಳಾಗಿದ್ದು, ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆ ಬೆನ್ನಲ್ಲೇ ಹಾಡಿ ಜನರು ತೀವ್ರ ಆತಂಕಕ್ಕೊಳಗಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:
error: Content is protected !!